ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ನಡೆಸಿದ ಪ್ರತಿಭಟನೆ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ರವಾನಿಸಿ ವಿದ್ಯಾರ್ಥಿನಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಡಿಯೋ ಚಿತ್ರೀಕರಣದ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜು.27ರಂದು ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿಯೋರ್ವಳಿಗೆ ಇನ್ಸ್ಟಾಗ್ರಾಂ ಮುಖಾಂತರ ಕೆಟ್ಟ, ಅಸಹ್ಯ ಸಂದೇಶ ಕಳುಹಿಸಲಾಗಿದೆ. ಜಿಗರ್ ಕೋಬ್ರಾ ಎಂಬ ಇನ್ಟಾಗ್ರಾಮ್ ಖಾತೆಯಿಂದ ಫಾಲೋವ್ ರಿಕ್ವೆಸ್ಟ್ ಕಳುಹಿಸಿ ಕೆಟ್ಟ ಹಾಗೂ ಆಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ವಿದ್ಯಾರ್ಥಿನಿ ಪೊಲೀಸರಿಗೆ ತಿಳಿಸಿದ್ದಾರೆ. ವಿದ್ಯಾರ್ಥಿನಿಯ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



