ಕರಾವಳಿ

ಮಂಗಳೂರು: ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು..!

ಜೂನ್ 3ರಂದು ನಿಗದಿಯಾಗಿದ್ದ ಬಹು ನಿರೀಕ್ಷಿತ ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ದಿಢೀರನೆ ರದ್ದುಗೊಳಿಸಿದೆ. ಈ ಕುರಿತು ದಕ್ಷಿಣ ಪಶ್ಚಿಮ ರೈಲ್ವೆಯ ಮುಖ್ಯ ಪ್ರಯಾಣಿಕ ಸಂಚಾರ ವ್ಯವಸ್ಥಾಪಕರ ಕಚೇರಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಸಂಬಂಧಪಟ್ಟ ಎಲ್ಲ ವಿಭಾಗಗಳಿಗೆ ಮಾಹಿತಿ ರವಾನಿಸಲಾಗಿದೆ.

ಇದರಿಂದಾಗಿ ಟ್ರಯಲ್ ರನ್‌ಗೆ ಸಂಬಂಧಿಸಿದಂತೆ ನಿಗದಿಪಡಿಸಲಾಗಿದ್ದ ಎಲ್ಲ ಕಾರ್ಯಾಚರಣೆಗಳು ಮತ್ತು ಮರು ನಿಗದಿತ ನಿಲ್ದಾಣ ವ್ಯವಸ್ಥೆಗಳನ್ನು ಹಿಂತೆಗೆದುಕೊಳ್ಳಲಾಗಿದೆ. ದಕ್ಷಿಣ ಪಶ್ಚಿಮ ರೈಲ್ವೆಯ ಸಂದೇಶ ಸಂಖ್ಯೆ ಖಿ.454/ಙPಖ-ಒಂಕಿ ವಂದೇ ಭಾರತ್/2026-27(241) ದಿನಾಂಕ 31.05.2026ರ ಪ್ರಕಾರ, ಜೂನ್ 3ರಂದು ಯಶವಂತಪುರ (ಙPಖ)-ಮಂಗಳೂರು (ಒಂಕಿ)-ಯಶವಂತಪುರ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಟ್ರಯಲ್ ರನ್ ನಡೆಸುವ ಪ್ರಸ್ತಾವನೆಯನ್ನು ಕೈಬಿಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ರೂಪಿಸಲಾಗಿದ್ದ ಯೋಜನೆಯ ಪ್ರಕಾರ, ಜೂನ್ 3ರಂದು ಬೆಳಗ್ಗೆ ಯಶವಂತಪುರದಿಂದ ಹೊರಟು ಮಂಗಳೂರು ತಲುಪಿ, ಪುನಃ ಬೆಂಗಳೂರಿಗೆ ಮರಳುವ ರೀತಿಯಲ್ಲಿ 8 ಬೋಗಿಗಳ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರಕ್ಕೆ ಚಾಲನೆ ನೀಡಲು ಸಿದ್ಧತೆ ನಡೆಸಲಾಗಿತ್ತು. ರೈಲಿನ ವೇಗ, ಹಳಿ ಸಾಮರ್ಥ್ಯ, ಸುರಂಗ ಹಾಗೂ ಪ್ರಮುಖವಾಗಿ ಶಿರಾಡಿ ಘಾಟ್ ವಿಭಾಗದ ತಾಂತ್ರಿಕ ಅಂಶಗಳನ್ನು ಪರಿಶೀಲಿಸುವ ಉದ್ದೇಶದಿಂದ ಈ ಸಂಚಾರ ಮಹತ್ವ ಪಡೆದಿತ್ತು. ಕಠಿಣ ಘಾಟ್ ರಸ್ತೆಯಲ್ಲಿ ಹೈಸ್ಪೀಡ್ ರೈಲಿನ ಕಾರ್ಯಕ್ಷಮತೆ ಹೇಗಿರಲಿದೆ ಎಂಬುದನ್ನು ನೋಡಲು ಕರಾವಳಿಯ ಜನತೆ ಮತ್ತು ರೈಲು ಅಭಿಮಾನಿಗಳು ತೀವ್ರ ಕುತೂಹಲ ತಳೆದಿದ್ದರು. ರೈಲ್ವೆ ಇಲಾಖೆಯು ಟ್ರಯಲ್ ರನ್ ರದ್ದುಗೊಳಿಸುವಿಕೆಗೆ ಯಾವುದೇ ನಿಖರವಾದ ಕಾರಣವನ್ನು ಪ್ರಕಟಿಸಿಲ್ಲ. ಆದರೆ, ಅಗತ್ಯ ರೇಕ್ ಲಭ್ಯತೆ (ರೈಲು ಬೋಗಿಗಳು), ಕಾರ್ಯಾಚರಣಾ ಆದ್ಯತೆಗಳು ಹಾಗೂ ಇತರ ತಾಂತ್ರಿಕ ಕಾರಣಗಳು ಇದಕ್ಕೆ ಕಾರಣವಾಗಿರಬಹುದು ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ ಶಿರಾಡಿ ಘಾಟ್ ವಿಭಾಗದಲ್ಲಿ ಸರಕು (ಗೂಡ್ಸ್) ರೈಲುಗಳ ಸಂಚಾರ ನಿರಂತರವಾಗಿ ನಡೆಯುತ್ತಿದ್ದು, ಹಳಿ ಮತ್ತು ಮೂಲಸೌಕರ್ಯ ಬಳಕೆಯಲ್ಲಿ ಯಾವುದೇ ಪ್ರಮುಖ ಅಡಚಣೆ ಇಲ್ಲ. ಆದಾಗ್ಯೂ ವಂದೇ ಭಾರತ್ ಟ್ರಯಲ್ ರನ್‌ಗೆ ಅಗತ್ಯವಿರುವ ವಿಶೇಷ ತಾಂತ್ರಿಕ ವ್ಯವಸ್ಥೆಗಳು ಮತ್ತು ರೈಲು ರೇಕ್ ಲಭ್ಯತೆಯ ಕೊರತೆಯಿಂದ ಈ ಪ್ರಸ್ತಾವನೆ ಮುಂದೂಡಲ್ಪಟ್ಟಿರಬಹುದು ಎಂಬ ಅಭಿಪ್ರಾಯವೂ ಕೇಳಿಬರುತ್ತಿದೆ. ಬೆಂಗಳೂರು – ಮಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭವಾದರೆ ಎರಡು ಪ್ರಮುಖ ನಗರಗಳ ನಡುವಿನ ಪ್ರಯಾಣ ಸಮಯ ಗಣನೀಯವಾಗಿ ಕಡಿಮೆಯಾಗಲಿದೆ. ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ, ವ್ಯಾಪಾರ ಮತ್ತು ದೈನಂದಿನ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಪ್ರಾಯೋಗಿಕ ಸಂಚಾರ ರದ್ದಾಗಿದ್ದರೂ, ರೈಲ್ವೆ ಇಲಾಖೆಯಿಂದ ಮುಂದಿನ ವೇಳಾಪಟ್ಟಿ ಹಾಗೂ ಪರಿಷ್ಕೃತ ಯೋಜನೆ ಕುರಿತು ಅಧಿಕೃತ ಮಾಹಿತಿ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…

17 hours ago

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…

17 hours ago

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…

17 hours ago

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…

17 hours ago

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…

17 hours ago

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…

17 hours ago