ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಸಂಭವಿಸಿದೆ.
ಇಲ್ಲಿನ ನಿವಾಸಿ ಮಧುಸೂಧನ ಅವರು ಮೃತಪಟ್ಟವರಾಗಿದ್ದು, ಅವರ ಅಣ್ಣ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23) ಕೊಲೆಗೈದವನಾಗಿದ್ದಾನೆ. ಕೇಶವ ಪೂಜಾರಿ ಅವರ ಮನೆಯಲ್ಲಿ ರವಿವಾರ ರಾತ್ರಿ ದೈವಕ್ಕೆ ತಂಬಿಲ ಕಾರ್ಯಕ್ರಮ ನಡೆಯುತ್ತಿತ್ತು. ರಾಹುಲ್ ಮತ್ತಿತರರು ಮನೆಯಿಂದ ಹೊರಗೆ ಕುಡಿದು ಗದ್ದಲ ಮಾಡುತ್ತಿದ್ದರು. ಇದನ್ನು ಆಕ್ಷೇಪಿಸಿದ ಮಧುಸೂದನ್ ಅವರನ್ನು ರಾಹುಲ್ ಕೋಪದಿಂದ ಬಿಯರ್ ಬಾಟಲ್‌ನಿಂದ ಕುತ್ತಿಗೆಗೆ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಮಧುಸೂದನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು. ಮೃತರು ಅವಿವಾಹಿತರಾಗಿದ್ದು, ಇಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದರು. ರಾಹುಲ್ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೃತದೇಹವನ್ನುಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದ್ದು, ಪುಂಜಾಲಕಟ್ಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪರಿಸರದಲ್ಲಿ ಯುವಕರು ಗಾಂಜಾ ಸೇವಿಸುತ್ತಿದ್ದು, ಅದರ ಪರಿಣಾಮದಿಂದ ಕೊಲೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…