ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಗಣೇಶ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು..!

ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಗಣೇಶ್ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದ್ದು, ಆತನನ್ನು ಬಂಧಿಸಿ ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಇರಿಸಲು ಜಿಲ್ಲಾಡಳಿತ ಆದೇಶಿಸಿದೆ.

ಬಡಗಬೆಟ್ಟು ಗ್ರಾಮದ ನೇತಾಜಿನಗರ 4ನೇ ಅಡ್ಡರಸ್ತೆ ನಿವಾಸಿಯಾಗಿರುವ ಗಣೇಶ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಕಳ್ಳತನ ಸೇರಿದಂತೆ ಒಟ್ಟು ಒಂಭತ್ತು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಮೂರು ಪ್ರಕರಣಗಳು ಖುಲಾಸೆಯಾಗಿದ್ದು, ನಾಲ್ಕು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ. ಉಳಿದ ಎರಡು ಪ್ರಕರಣಗಳ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅವರು ಸೋಮವಾರ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ. ಅದರಂತೆ ಆರೋಪಿಯನ್ನು ಕಲಬುರ್ಗಿ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!