ಜನ ಮನದ ನಾಡಿ ಮಿಡಿತ

Advertisement

ಸುಳ್ಯ: ಮೊಬೈಲ್ ವಿಚಾರವಾಗಿ ಬಾಲಕನಿಗೆ ಗದರಿದ ತಾಯಿ..! ಮುನಿಸಿಕೊಂಡ ಬಾಲಕ ನಾಪತ್ತೆ…?

ಮೊಬೈಲ್ ನೋಡುವ ವಿಚಾರವಾಗಿ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ 16 ವರ್ಷದ ಅಪ್ರಾಪ್ತ ಬಾಲಕನೊಬ್ಬ ಮನೆಯಿಂದ ಹೊರಹೋಗಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸುಳ್ಯದ ಕಸಬಾ ಗ್ರಾಮದಲ್ಲಿ ನಡೆದಿದೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಿವಾಸಿಯಾಗಿದ್ದು, ಪ್ರಸ್ತುತ ಸುಳ್ಯದ ಬೋರುಗುಡ್ಡೆಯಲ್ಲಿ ಪೋಷಕರೊಂದಿಗೆ ವಾಸವಿದ್ದ ಸೈಯದ್ ಆಲಿ ಸೈಯದ್ (16) ನಾಪತ್ತೆಯಾದ ಬಾಲಕ. ಮೇ 30ರಂದು ಬೆಳಗ್ಗೆ ಸೈಯದ್ ಗೆ ಮೊಬೈಲ್ ನೋಡುತ್ತಿರುವ ವಿಚಾರದಲ್ಲಿ ತಾಯಿ ಬೈದು ಮೊಬೈಲ್ ಹವ್ಯಾಸ ಬಿಡುವಂತೆ ಬುದ್ಧಿಮಾತು ಹೇಳಿದ್ದರು. ಇದರಿಂದ ಮನಸ್ತಾಪ ಮಾಡಿಕೊಂಡ ಬಾಲಕ, ಸ್ವಲ್ಪ ಸಮಯದ ಬಳಿಕ ಯಾರಿಗೂ ಹೇಳದೆ ಮನೆಯಿಂದ ಹೊರಹೋಗಿದ್ದಾನೆ. ಸೈಯದ್ ಎಷ್ಟು ಹೊತ್ತಾದರೂ, ಮನೆಗೆ ಹಿಂತಿರುಗದ ಹಿನ್ನೆಲೆ ಆತನ ಕುಟುಂಬಸ್ಥರು ಆತನ ಗೆಳೆಯರಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಿದರೂ ಪತ್ತೆಯಾಗಿರುವುದಿಲ್ಲ. ಬಳಿಕ ದೂರು ದಾಖಲಿಸಿಕೊಂಡ ಸುಳ್ಯ ಪೊಲೀಸ್ ಠಾಣೆಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!