ಕರಾವಳಿ

ಮಂಗಳೂರಿನಲ್ಲಿ NRAI ಅಧ್ಯಾಯಕ್ಕೆ ಚಾಲನೆ…!

ಮಂಗಳೂರು, ಜೂನ್ 4: ಭಾರತೀಯ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮವನ್ನು ಪ್ರತಿನಿಧಿಸುವ ಸರ್ವೋಚ್ಛ ಸಂಸ್ಥೆಯಾದ National Restaurant Association of India (NRAI)ಯ ಮಂಗಳೂರು ಮತ್ತು ಪಶ್ಚಿಮ ಕರ್ನಾಟಕ ಘಟಕದ ಅಧಿಕೃತ ಉದ್ಘಾಟನಾ ಸಮಾರಂಭವು ಇಂದು ಸಂಜೆ 6 ಗಂಟೆಗೆ ನಗರದ ಹೋಟೆಲ್ ಅವತಾರ್‌ನಲ್ಲಿ ನಡೆಯಲಿದೆ ಎಂದು ಎನ್.ಆರ್.ಎ.ಐ.ಪ್ರಧಾನ ಕಾರ್ಯದರ್ಶಿ ಪ್ರಕುಲ್ ಕುಮಾರ್ ತಿಳಿಸಿದ್ದಾರೆ.

 

ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಆಹಾರ ಸಂಸ್ಕೃತಿಯನ್ನು ಮತ್ತಷ್ಟು ಬಲಪಡಿಸುವುದು, ಆತಿಥ್ಯ ಕ್ಷೇತ್ರದ ಬೆಳವಣಿಗೆಗೆ ಉತ್ತೇಜನ ನೀಡುವುದು ಹಾಗೂ ಕರಾವಳಿ ಕರ್ನಾಟಕವನ್ನು ಪ್ರಮುಖ ಆಹಾರ ಮತ್ತು ಪ್ರವಾಸೋದ್ಯಮ ತಾಣವಾಗಿ ರೂಪಿಸುವ ನಿಟ್ಟಿನಲ್ಲಿ ಈ ಘಟಕದ ಆರಂಭ ಮಹತ್ವದ ಮೈಲುಗಲ್ಲಾಗಲಿದೆ ಎಂದು ಹೇಳಿದರು.

ಕರ್ನಾಟಕದ ಆಹಾರ ಮತ್ತು ಆತಿಥ್ಯ ಕ್ಷೇತ್ರವು ನಿರಂತರ ಬೆಳವಣಿಗೆಯ ಹಾದಿಯಲ್ಲಿದ್ದು, ಜನರ ಪ್ರವಾಸೋದ್ಯಮದತ್ತ ಹೆಚ್ಚುತ್ತಿರುವ ಆಸಕ್ತಿ, ಜೀವನಮಟ್ಟದ ಸುಧಾರಣೆ ಹಾಗೂ ಆದಾಯದ ಏರಿಕೆ ಈ ಕ್ಷೇತ್ರದ ಅಭಿವೃದ್ಧಿಗೆ ಪ್ರಮುಖ ಕಾರಣಗಳಾಗಿವೆ ಎಂದು ಅವರು ತಿಳಿಸಿದರು.

ಮಂಗಳೂರು ಮತ್ತು ಪಶ್ಚಿಮ ಕರ್ನಾಟಕ ಪ್ರದೇಶವು ಇತ್ತೀಚಿನ ವರ್ಷಗಳಲ್ಲಿ ಪ್ರಮುಖ ಆತಿಥ್ಯ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಹೆಚ್ಚುತ್ತಿರುವ ಉಪಹಾರ ಗೃಹಗಳು, ಕೆಫೆಗಳು, ಬಾರ್‌ಗಳು, ಕ್ಲೌಡ್ ಕಿಚನ್‌ಗಳು ಹಾಗೂ ಪ್ರವಾಸೋದ್ಯಮಕ್ಕೆ ಪೂರಕವಾದ ವಿವಿಧ ಉದ್ಯಮಗಳ ಬೆಳವಣಿಗೆ ಈ ಪ್ರದೇಶದ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತಿದೆ ಎಂದು ಹೇಳಿದರು.

ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ವಾರ್ಷಿಕವಾಗಿ 11 ಕೋಟಿಗೂ ಅಧಿಕ ದೇಶೀಯ ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಇದು ರಾಜ್ಯದ ಒಟ್ಟು ದೇಶೀಯ ಪ್ರವಾಸಿಗರ ಸಂಖ್ಯೆಯ ಶೇ.10 ರಿಂದ 15ರಷ್ಟು ಪಾಲನ್ನು ಹೊಂದಿರುವುದು ವಿಶೇಷವಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ಪ್ರಶಾಂತ್ ರಾವ್ ಅರೂರ್, ಡೆನ್ ಡಿಸೋಜ, ಅಶ್ವಿನ್ ರೈ, ಸುಧಾಕರ್ ಪೂಂಜಾ, ಶಿವಪ್ರಸಾದ್ ಶೆಟ್ಟಿ ಹಾಗೂ ವರದ್ ರಾಜ್ ಶೆಣೈ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…

2 hours ago

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…

2 hours ago

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…

2 hours ago

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…

2 hours ago

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…

2 hours ago

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…

2 hours ago