ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬೈಕ್-ಸ್ಕೂಟರ್ ಡಿಕ್ಕಿ: 10 ವರ್ಷದ ಬಾಲಕಿ ಸಾವು…!

 

ಕಲ್ಲಡ್ಕದಿ0ದ ಮಾಣಿಗೆ ತೆರಳುತ್ತಿದ್ದ ಬೈಕ್‌ಗೆ ಸ್ಕೂಟರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಹತ್ತು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಬಾಳ್ತಿಲ ಗ್ರಾಮದ ಹೇಮಂತ್ ಕುಮಾರ್ ಎಂಬವರ ಪುತ್ರಿ ನೈರುತಿ ಎಂ. ಸುವರ್ಣ ಮೃತಪಟ್ಟ ಬಾಲಕಿ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿಯ ವೇಳೆ ಮೃತಪಟ್ಟಿದ್ದಾಳೆ. ನೆಟ್ಲ ಸದಾಶಿವ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಪತ್ನಿ ಮತ್ತು ಮಕ್ಕಳಾದ ನೈರುತಿ ಮತ್ತು ಆಕೆಯ ತಂಗಿಯೊ0ದಿಗೆ ಮನೆಗೆ ತೆರಳುತ್ತಿದ್ದ ವೇಳೆ ಹೇಮಂತ್ ಅವರಿದ್ದ ಬೈಕ್‌ಗೆ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಸೂರಿಕುಮೇರು ಸಮೀಪ ಈ ಘಟನೆ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ, ಕಾಂಕ್ರೀಟ್ ರಸ್ತೆಗೆ ನೈರಿತಿ ಬಿದ್ದಿದ್ದಾಳೆ. ಈ ಸಂದರ್ಭ ತಲೆಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಈಕೆ ಸ್ಥಳೀಯ ಪ್ರಾಥಮಿಕ ಶಾಲೆಗೆ ಹೋಗುತ್ತಿದ್ದು, ಭಜನಾ ತರಬೇತಿಯನ್ನೂ ಪಡೆಯುತ್ತಿದ್ದಳು. ಉತ್ತಮ ಭಜನಾಪಟುವೂ ಆಗಿದ್ದಳು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!