ಕಲ್ಲಡ್ಕದಿ0ದ ಮಾಣಿಗೆ ತೆರಳುತ್ತಿದ್ದ ಬೈಕ್‌ಗೆ ಸ್ಕೂಟರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಹತ್ತು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಬಾಳ್ತಿಲ ಗ್ರಾಮದ ಹೇಮಂತ್ ಕುಮಾರ್ ಎಂಬವರ ಪುತ್ರಿ ನೈರುತಿ ಎಂ. ಸುವರ್ಣ ಮೃತಪಟ್ಟ ಬಾಲಕಿ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿಯ ವೇಳೆ ಮೃತಪಟ್ಟಿದ್ದಾಳೆ. ನೆಟ್ಲ ಸದಾಶಿವ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಪತ್ನಿ ಮತ್ತು ಮಕ್ಕಳಾದ ನೈರುತಿ ಮತ್ತು ಆಕೆಯ ತಂಗಿಯೊ0ದಿಗೆ ಮನೆಗೆ ತೆರಳುತ್ತಿದ್ದ ವೇಳೆ ಹೇಮಂತ್ ಅವರಿದ್ದ ಬೈಕ್‌ಗೆ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಸೂರಿಕುಮೇರು ಸಮೀಪ ಈ ಘಟನೆ ನಡೆದಿದೆ. ಡಿಕ್ಕಿ ಹೊಡೆದ ಪರಿಣಾಮ, ಕಾಂಕ್ರೀಟ್ ರಸ್ತೆಗೆ ನೈರಿತಿ ಬಿದ್ದಿದ್ದಾಳೆ. ಈ ಸಂದರ್ಭ ತಲೆಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಈಕೆ ಸ್ಥಳೀಯ ಪ್ರಾಥಮಿಕ ಶಾಲೆಗೆ ಹೋಗುತ್ತಿದ್ದು, ಭಜನಾ ತರಬೇತಿಯನ್ನೂ ಪಡೆಯುತ್ತಿದ್ದಳು. ಉತ್ತಮ ಭಜನಾಪಟುವೂ ಆಗಿದ್ದಳು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…