ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ; ಆರೋಪಿ ಬಂಧನ..!

ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ.

ಅವರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕವಸ್ತುವಿನ ಒಟ್ಟು ಮೌಲ್ಯ ಸುಮಾರು ರೂ.16,40,000 ಎಂದು ಅಂದಾಜಿಸಲಾಗಿದೆ. ಬೆಂಗಳೂರು ನಗರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ ಮಂಗಳೂರು ನಗರಕ್ಕೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು ರೂ.10,40,000 ಮೌಲ್ಯದ 104 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪ್ರಣಾಮ್ ಕೋಟ್ಯಾನ್ ಎಂಬಾತನ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ಹಲ್ಲೆ ಹಾಗೂ ಬೆದರಿಕೆ ಪ್ರಕರಣ, 2026ರಲ್ಲಿ ಮಾದಕವಸ್ತು ಸೇವನೆ ಪ್ರಕರಣ, 2022ರಲ್ಲಿ ಅಬಕಾರಿ ಇಲಾಖೆಯಲ್ಲಿ ಗಾಂಜಾ ಸಂಬಂಧಿತ ಪ್ರಕರಣ ಹಾಗೂ 2022ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ದಾಖಲಾಗಿವೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!