ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಕಾರ್ಯಾಚರಣೆ ನಡೆಸಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಿಂದ ಸುಮಾರು ರೂ.6,00,000 ಮೌಲ್ಯದ 60 ಗ್ರಾಂ ಎಂಡಿಎಂಎ ಹಾಗೂ ಜಿಪ್-ಲಾಕ್ ಕವರ್ಗಳು, ಒಂದು ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಧನರಾಜ್ ಪೂಜಾರಿ ಎಂಬಾತನ ಮೇಲೆ ಮಂಗಳೂರು ದಕ್ಷಿಣ, ಉತ್ತರ, ಸುರತ್ಕಲ್, ಬರ್ಕೆ, ಕಾವೂರು, ಕಂಕನಾಡಿ ನಗರ ಹಾಗೂ ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಹಲ್ಲೆ, ಬೆದರಿಕೆ ಸೇರಿದಂತೆ ಸುಮಾರು 12 ಪ್ರಕರಣಗಳು ಈಗಾಗಲೇ ದಾಖಲಾಗಿವೆ. 2016ರಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಂಭೀರ ಹಲ್ಲೆ ಪ್ರಕರಣದಲ್ಲಿ ಆರೋಪಿಗೆ 3 ವರ್ಷಗಳ ಶಿಕ್ಷೆಯೂ ವಿಧಿಸಲಾಗಿತ್ತು. ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್…
ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದ ವೇಳೆ ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ನೀಡಿದ್ದ ಭರವಸೆಯನ್ನು ರವಿ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…