ಪ್ರತಿವರ್ಷ ಆಯೋಜಿಸಲಾಗುವ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮವು ಜೂನ್ 9ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ, ಪಿ.ಪಿ. ಗೋಮತಿ ಎಜುಕೇಶನ್ ಟ್ರಸ್ಟ್ (ರಿ.), ಮಂಗಳೂರು ವಿಶ್ವವಿದ್ಯಾನಿಲಯ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ವರ್ಷದ ಉಪನ್ಯಾಸದಲ್ಲಿ ದೀಪಾ ಭಸ್ತಿ ಅವರು “ಚಿಂತನೆಯೇ ಭಿನ್ನಮತವಾದಾಗ” ಭಾಷೆ ಮತ್ತು ಸಂಸ್ಕೃತಿ ಕುರಿತು ಕೆಲವು ಆಲೋಚನೆಗಳು ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಭಾಷೆ, ಸಂಸ್ಕೃತಿ, ವೈವಿಧ್ಯತೆ ಹಾಗೂ ಭಿನ್ನಾಭಿಪ್ರಾಯಗಳ ಸ್ಥಾನಮಾನವನ್ನು ಸಮಕಾಲೀನ ಸಮಾಜದ ನೆಲೆಯಲ್ಲಿ ವಿಶ್ಲೇಷಿಸುವ ಈ ಉಪನ್ಯಾಸವು ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಸಾರ್ವಜನಿಕರಿಗೆ ಹೊಸ ಚಿಂತನೆಗಳನ್ನು ನೀಡುವ ನಿರೀಕ್ಷೆಯಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದೀಪಾ ಭಸ್ತಿ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದ್ದು, ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂದು ಪ್ರೊ. ಧರ್ಮ ಅಭಿಪ್ರಾಯಪಟ್ಟರು.ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಓದು, ಬರವಣಿಗೆ ಹಾಗೂ ಜೀವನಮೌಲ್ಯಗಳ ಆಧಾರಿತ ಸಾಹಿತ್ಯ ಸೃಷ್ಟಿಯ ಬಗ್ಗೆ ಆಸಕ್ತಿ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು, ಅಧ್ಯಾಪಕರು, ಸಾಹಿತ್ಯಾಸಕ್ತರು, ಪತ್ರಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಪಿ.ಪಿ. ಗೋಮತಿ ಎಜುಕೇಶನ್ ಟ್ರಸ್ಟ್ನ ಸದಸ್ಯ ಡಾ. ಬಿ. ಶ್ರೀನಿವಾಸ ಕಕ್ಕಿಲ್ಲಾಯ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಶ್ರೀನಾಥ್, ಸಂಘಟಕರಾದ ಡಾ. ನಾಗಪ್ಪ ಗೌಡ, ಡಾ. ಧನಂಜಯ ಕುಂಬ್ಳೆ, ನಾಗೇಶ್ ಕಲ್ಲೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು,…
ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ…
ಛಾವಣಿಯ ಶೀಟ್‌ಗಳನ್ನು ಹಾಕುವಾಗ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಕಡೆಪಲ್ಲದಲ್ಲಿ ಸಂಭವಿಸಿದೆ. ಮೃತನನ್ನು ಮಾರ್ಪಾಡಿ…
ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಒಂದು ಕ್ಯಾಂಟರ್‌ಗೆ ಢಿಕ್ಕಿ ಹೊಡೆದ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಆಂಬುಲೆನ್ಸ್…
ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ ಮೃತಪಟ್ಟವರು.…
ಪಶ್ಚಿಮ ಬಂಗಾಳ ಮೂಲದ 21 ವರ್ಷದ ಹಸೀನಾ ಖತೂನ್ ಎಂಬುವವರು ಜೋಕಟ್ಟೆ ಹಳೇ ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದು,…