ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್ ಎಂಬ ಧ್ಯೇಯವಾಕ್ಯದೊಂದಿಗೆ ಮೇರಾ ಯುವ ಭಾರತ, ದಕ್ಷಿಣ ಕನ್ನಡ ವತಿಯಿಂದ ಭವ್ಯ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾವನ್ನು ಆಯೋಜಿಸಲಾಯಿತು.
ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಮೇರಾ ಯುವ ಭಾರತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್, ಮಂಗಳೂರು ಸೈಕ್ಲಿಂಗ್ ಕ್ಲಬ್, ಸುರತ್ಕಲ್ ಬೀಚ್ ರನ್ನರ್ಸ್, ಫ್ರೀಜಿಂಗ್ ಸನ್ ಹಾಗೂ ವಿ.ಆರ್. ಸೈಕ್ಲಿಂಗ್ ಕ್ಲಬ್‌ಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.
ನಗರದ ಮಂಗಳಾ ಕ್ರೀಡಾಂಗಣದಿಂದ ಜಾಥಾಕ್ಕೆ ಚಾಲನೆ ನೀಡಿದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ಆರೋಗ್ಯಕರ ಜೀವನಶೈಲಿ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸೈಕ್ಲಿಂಗ್ ಮಹತ್ವದ ಪಾತ್ರ ವಹಿಸುತ್ತದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೇರಾ ಯುವ ಭಾರತ ಉಪನಿರ್ದೇಶಕ ಉಲ್ಲಾಸ್ ಕೆ.ಟಿ.ಕೆ. ಮಾತನಾಡಿ, ಯುವಜನರು ಆರೋಗ್ಯ ಹಾಗೂ ರಾಷ್ಟ್ರ ನಿರ್ಮಾಣದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಜಾಥಾದಲ್ಲಿ ಮಕ್ಕಳು, ಯುವಕರು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ಸೇರಿದಂತೆ ನೂರಾರು ಮಂದಿ ಭಾಗವಹಿಸಿ ಫಿಟ್ ಇಂಡಿಯಾ ಅಭಿಯಾನ ಮತ್ತು ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿದರು. ಮಂಗಳಾ ಕ್ರೀಡಾಂಗಣದಿಂದ ಆರಂಭವಾದ ಜಾಥಾ ಕಾರ್‌ಸ್ಟ್ರೀಟ್, ಕ್ಲಾಕ್ ಟವರ್, ಪಿವಿಎಸ್ ಸರ್ಕಲ್, ಲಾಲ್‌ಬಾಗ್ ಹಾಗೂ ಲೇಡಿಹಿಲ್ ಮಾರ್ಗವಾಗಿ ಸಂಚರಿಸಿ ಮತ್ತೆ ಮಂಗಳಾ ಕ್ರೀಡಾಂಗಣದಲ್ಲಿ ಸಮಾರೋಪಗೊಂಡಿತು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜಕ ಶೇಷಪ್ಪ ಅಮೀನ್, ಚಿತ್ತರಂಜನ್ ಬೋಳಾರ್, ಚಲನಚಿತ್ರ ನಟ ದಿನೇಶ್ ಅತ್ತಾವರ, ಅನಿಲ್ ಶೆಟ್, ಹಾರ್ದಿಕ್ ರೈ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…