ಎ. 4 2026ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಅ.ಕ್ರ: 38/2026 ಪ್ರಕರಣದ ತನಿಖೆ ನಡೆಸಲಾಗಿ ದಿನಾಂಕ: 15-05-2026 ರಂದು ಆರೋಪಿ ಬಂಟ್ವಾಳ ಕೊಳ್ನಾಡು ನಿವಾಸಿ ಹಮೀದ್ ( ಹಾಲಿ ವಾಸ: ಕಾಸರಗೋಡು) ಎಂಬಾತನನ್ನು ವಶಕ್ಕೆ ಪಡೆದ ತನಿಖಾ ತಂಡ ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿ, ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.
ಸದ್ರಿ ಆರೋಪಿಯ ವಿಚಾರಣೆಯ ವೇಳೆ ನೀಡಿದ ಮಾಹಿತಿಯ ಅಧಾರದಲ್ಲಿ ದಿನಾಂಕ: 07-06-2026 ರಂದು ಮತ್ತೋರ್ವ ಆರೋಪಿ ಬಂಟ್ವಾಳ ಕೊಳ್ನಾಡು ನಿವಾಸಿ (ಹಾಲಿ ವಾಸ: ಕಾಸರಗೋಡು) ಜಾಬೀರ್ ಜಾಬೀ (38) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಪುಂಜಾಲಕಟ್ಟೆ ಠಾಣಾ ಅ.ಕ್ರ: 38/2026 ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ ರೂ 2,00,000/- ನಗದು ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ: 28/2025 ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಸದ್ರಿ ಸೊತ್ತುಗಳ ಒಟ್ಟು ಮೌಲ್ಯ ರೂ 23,67,000/- ಗಳಾಗಿರುತ್ತದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಸದ್ರಿ ಪ್ರಕರಣಗಳನ್ನು ಹೊರತುಪಡಿಸಿದಂತೆ ಆರೋಪಿಗಳು ಉಪ್ಪಿನಂಗಡಿ ಠಾಣೆ, ಬಂಟ್ವಾಳ ನಗರ ಠಾಣೆ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 05 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದ್ದು ತನಿಖೆ ಮುಂದುವರಿಯುತ್ತದೆ.
ಈ ಪ್ರಕರಣದ ಪತ್ತೆಕಾರ್ಯದಲ್ಲಿ ಬೆಳ್ತಂಗಡಿ ಉಪವಿಭಾಗಾಧೀಕ್ಷಕರಾದ ಶ್ರೀಮತಿ ರೋಹಿಸಿ ಸಿ.ಕೆ ರವರ ನೇತ್ರತ್ವದಲ್ಲಿ, ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್, ಉಪ್ಪಿನಂಗಡಿ ಗ್ರಾಮಾಂತರ ಸಿ.ಪಿ.ಐ ನಾಗರಾಜ್ ಹೆಚ್.ಇ, ಪುಂಜಾಲಕಟ್ಟೆ ಠಾಣಾ ಪಿ.ಎಸ್.ಐ ರಾಜೇಶ್ ಕೆ.ವಿ, ಸಿಬ್ಬಂದಿಗಳಾದ ಏ.ಎಸ್.ಐ ಬೆನ್ನಿಚ್ಚನ್, ಏ.ಎಸ್.ಐ ಸುಂದರ ಶೆಟ್ಟಿ, ಏ.ಎಸ್.ಐ ವಿಶ್ವನಾಥ್ ನಾಯ್ಕ್, ಪ್ರವೀಣ್ ಮೂರುಗೋಳಿ, ರಾಜೇಶ್ ಎನ್, ವಿಜಯ್ ಕುಮಾರ್ ರೈ, ರಾಹುಲ್ ರಾವ್, ಸಂತೋಷ್, ಬಸವರಾಜ್, ರಜಿತ್, ನಾಗರಾಜ್ ರವರು ಭಾಗಿಯಾಗಿದ್ದು, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ರವರು ಸಹಕರಿಸಿರುತ್ತಾರೆ.
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…