ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಅಂಡರ್‌ಪಾಸ್ ಸಮೀಪ ಸೋಮವಾರ ಸಂಜೆ ನಡೆದಿದೆ.

ಮೃತರನ್ನು ಕೋಟೇಶ್ವರ ಮಾರ್ಕೋಡು ನಿವಾಸಿ ಪ್ರದೀಪ್ ಪೂಜಾರಿ (35) ಎಂದು ಗುರುತಿಸಲಾಗಿದೆ. ಅವರು ಗಾರೆ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಬಂದಿದ್ದ ಬೃಹತ್ ಕಂಟೇನರ್ ಲಾರಿಯೊಂದು ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಡರ್‌ಪಾಸ್ ಬಳಿ ಯು-ಟರ್ನ್ ಪಡೆಯಲು ಮುಂದಕ್ಕೆ ಸಾಗುತ್ತಿದ್ದ ವೇಳೆ, ಪೇಟೆ ಕಡೆಯಿಂದ ಹಾಲಾಡಿ ರಸ್ತೆಗೆ ತೆರಳುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿಯ ಪರಿಣಾಮ ಬೈಕ್ ಸಹಿತ ಕೆಳಗೆ ಬಿದ್ದ ಪ್ರದೀಪ್ ಪೂಜಾರಿ ಅವರ ಮೇಲೆ ಲಾರಿ ಹರಿದ ಪರಿಣಾಮ ಗಂಭೀರ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕುಂದಾಪುರ ಸಂಚಾರಿ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಅನೂಪ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

error: Content is protected !!