ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಅಂಡರ್‌ಪಾಸ್ ಸಮೀಪ ಸೋಮವಾರ ಸಂಜೆ ನಡೆದಿದೆ.
ಮೃತರನ್ನು ಕೋಟೇಶ್ವರ ಮಾರ್ಕೋಡು ನಿವಾಸಿ ಪ್ರದೀಪ್ ಪೂಜಾರಿ (35) ಎಂದು ಗುರುತಿಸಲಾಗಿದೆ. ಅವರು ಗಾರೆ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಉಡುಪಿ ಕಡೆಯಿಂದ ಬಂದಿದ್ದ ಬೃಹತ್ ಕಂಟೇನರ್ ಲಾರಿಯೊಂದು ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಡರ್‌ಪಾಸ್ ಬಳಿ ಯು-ಟರ್ನ್ ಪಡೆಯಲು ಮುಂದಕ್ಕೆ ಸಾಗುತ್ತಿದ್ದ ವೇಳೆ, ಪೇಟೆ ಕಡೆಯಿಂದ ಹಾಲಾಡಿ ರಸ್ತೆಗೆ ತೆರಳುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಢಿಕ್ಕಿಯ ಪರಿಣಾಮ ಬೈಕ್ ಸಹಿತ ಕೆಳಗೆ ಬಿದ್ದ ಪ್ರದೀಪ್ ಪೂಜಾರಿ ಅವರ ಮೇಲೆ ಲಾರಿ ಹರಿದ ಪರಿಣಾಮ ಗಂಭೀರ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕುಂದಾಪುರ ಸಂಚಾರಿ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಅನೂಪ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…