ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕದ ವಕ್ತಾರ ಮುಸ್ತಾಕ್ ಹೆನ್ನಾಬೈಲು ಆಗ್ರಹಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಕಸಾಯಿಖಾನೆಗಳನ್ನು ಮುಚ್ಚಿ, ಗೋಶಾಲೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಗೋಹತ್ಯೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರನ್ನು ದಾರಿತಪ್ಪಿಸುತ್ತಿದೆ ಎಂದು ಆರೋಪಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ವಿಷಯದಲ್ಲಿ ಹೆಚ್ಚಿನ ಪ್ರಚಾರ ನಡೆಯುತ್ತಿದೆಯೇ ಹೊರತು, ಗೋಹತ್ಯೆ ನಿಷೇಧಿಸಲು ಅಗತ್ಯ ಕ್ರಮಗಳು ಕೈಗೊಳ್ಳಲಾಗಿಲ್ಲ ಎಂದು ಟೀಕಿಸಿದರು. ಬಿಜೆಪಿ ಆಡಳಿತವಿರುವ ಕೆಲವು ರಾಜ್ಯಗಳಿಂದಲೂ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ರಫ್ತು ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ತಡೆಯುವ ನಿಟ್ಟಿನಲ್ಲಿ ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು. ಕೇಂದ್ರ ಸರ್ಕಾರ ದೇಶವ್ಯಾಪಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದು, ಗೋ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಈ ಕುರಿತು ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಸಂವಿಧಾನಾತ್ಮಕ ಹಕ್ಕುಗಳ ಅಡಿಯಲ್ಲಿ ಶಾಂತಿಯುತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಪ್ರಮುಖರಾದ ಅಬ್ದುಲ್ ಹಫೀಝ್ ಖಾಸಿಮಿ, ಝಾಕೀರ್ ಹುಸೈನ್ ಉಚ್ಚಿಲ, ಇಬ್ರಾಹಿಂ ನಡುಪದವು ಹಾಗೂ ಕೋಟ ಇಬ್ರಾಹಿಂ ಸಾಹೇಬ್ ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…