ಕರಾವಳಿ

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಅದರ್ಶ್ ನೇತ್ರತ್ವದಲ್ಲಿ ಟ್ರಾಫಿಕ್ ಪೋಲೀಸರ ತಂಡ ಪರಿಶೀಲನೆ ನಡೆಸಿವೆ.

ಬೆಳಿಗ್ಗೆ 6 ಗಂಟೆಯಿಂದಲೇ ಸ್ವತಃ ಟ್ರಾಫಿಕ್ ಎಸ್.ಐ. ಆದರ್ಶ್ ಅವರೇ ಫೀಲ್ಡಿಗಿಳಿದು ಶಾಲಾ ಬಸ್‌ಗಳನು ಬಿಸಿರೋಡಿನ ಸರ್ಕಲ್ ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಪ್ರತಿಯೊಂದು ಬಸ್‌ಗಳ ದಾಖಲೆ ಸಹಿತ ಇತರ ನಿಯಮಗಳನ್ನು ಅನುಸರಿಸುತ್ತಿದ್ದಾರೆಯೇ ಎಂಬುದನ್ನು ಖಾತರಿ ಪಡಿಸಿಕೊಂಡರು. ಕಾನೂನು ಪಾಲಿಸದ ಚಾಲಕರಿಗೆ ಹಾಗೂ ನಿಯಮಾನುಸಾರ ಇಲ್ಲದಿರುವ ಬಸ್‌ಗಳಿಗೆ ಕೇಸು ಹಾಕಿ ಎಚ್ಚರಿಕೆ ನೀಡಿದ್ದಾರೆ. ಸುಮಾರು 20 ಪ್ರಕರಣಗಳು ಒಂದೇ ದಿನದಲ್ಲಿ ದಾಖಲು ಮಾಡಿದ್ದಾರೆ.

ಅದರಲ್ಲಿ ಯೂನಿಫಾರ್ಮ್ ಹಾಕದೆ ವಾಹನ ಚಲಾಯಿಸುವ ಆರು ಚಾಲಕರು, ಆರ್.ಟಿ.ಒ.ಇಲಾಖೆ ನಿಗದಿಪಡಿಸಿದ ಸೀಟುಗಳನ್ನು ಹೊರತುಪಡಿಸಿ, ಹೆಚ್ಚುವರಿಯಾಗಿ ಮಕ್ಕಳನ್ನು ಬಸ್‌ಗಳಲ್ಲಿ ತುಂಬಿಸಿಕೊಂಡು ಹೋಗುವ ನಾಲ್ಕು ಶಾಲಾ ಬಸ್‌ಗಳಿಗೆ, ವಾಹನದ ಪಿಟ್‌ನೆಸ್ ಪ್ರಮಾಣ ಪತ್ರದ ಅವಧಿ ಮುಗಿದ ಒಂದು ಬಸ್ ಹಾಗೂ ದಾಖಲೆಗಳಿಲ್ಲದೆ ವಾಹನಗಳಿಗೆ ಕೇಸು ದಾಖಲು ಮಾಡಿದ್ದಾರೆ. ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ವಾಹನಗಳಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇಲಾಖೆಯ ನಿಯಮಗಳನ್ನು ಅಗತ್ಯವಾಗಿ ಪಾಲಿಸಬೇಕಿದೆ. ಮಳೆಗಾಲದಲ್ಲಿ ಜಾಗರೂಕತೆಯಿಂದ ವಾಹನ ಚಲಾಯಿಸಬೇಕು, ಚಾಲಕರು ಮುಂಜಾಗ್ರತಾ ಕ್ರಮವನ್ನು ಅನುಸರಿಸಲೇ ಬೇಕು. ಒಂದು ವೇಳೆ ಕಾನೂನು ಮೀರಿ ನಿಯಮಗಳನ್ನು ಪಾಲಿಸದೇ ವಾಹನ ಚಲಾಯಿಸುವ ಸ್ಕೂಲ್ ಬಸ್ ಹಾಗೂ ಚಾಲಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಟ್ರಾಫಿಕ್ ಎಸ್.ಐ.ಅದರ್ಶ್ ತಿಳಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

10 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

10 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

10 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

10 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

10 hours ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

10 hours ago