ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಗಣೇಶ್ ನಾಯಕ್ ಎಂಬವರು ಪೋಲೀಸ್ ಇಲಾಖೆಗೆ ದೂರು ನೀಡಿದ್ದಾರೆ.
ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆಯಲು ದೋಣಿಗಳು ನಿಂತುಕೊಂಡಿದ್ದಲ್ಲದೆ, ಈಗಾಗಲೇ ಅಕ್ರಮವಾಗಿ ತೆಗೆದ ಹತ್ತುಕ್ಕೂ ಆಧಿಕ ಮರಳು ಲೋಡ್‌ಗಳನ್ನು ದಾಸ್ತಾನು ಮಾಡಲಾಗಿದೆ. ಪಾಣೆಮಂಗಳೂರು ಸೇತುವೆ ಹಾಗೂ ರೈಲ್ವೆ ಸೇತುವೆಯಿಂದ ಕೂಗಳತೆಯ ದೂರದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆಯಾದರೂ ಪೋಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪವನ್ನು ಮಾಡಿದ್ದಾರೆ.
ಪೋಲೀಸ್ ಈಗಾಗಲೇ ಮರಳುಗಾರಿಕೆಯ ಬಗ್ಗೆ ಗಣಿ ಇಲಾಖೆಯವರಿಗೆ ಲಿಖಿತ ದೂರು ನೀಡಿದ್ದು ಅವರ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂಬ ಮಾತನ್ನು ಗಣೇಶ್ ನಾಯಕ್ ಅವರು ತಿಳಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…