ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜನನ್ ಜಗನ್ನಾಥ್, ಸುಶಾನ್ ಪೂಜಾರಿ ಮತ್ತು ಪರೀಕ್ಷಿತ್ ಎಂದು ಗುರುತಿಸಲಾಗಿದೆ. ಗೂಡ್ ಶೆಡ್ಡೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಆರೋಪಿಗಳಿಂದ 11.68 ಗ್ರಾಂ ಎಂಡಿಎಂಎ, 1,110 ನಗದು, ಮೂರು ಮೊಬೈಲ್ ಫೋನ್‌ಗಳು ಹಾಗೂ ಒಂದು ತೂಕ ಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!