ಕೇರಳದಲ್ಲಿ ಮತ್ತೊಮ್ಮೆ ನಿಫಾ ವೈರಸ್ ಆತಂಕ ಸೃಷ್ಟಿಯಾಗಿದ್ದು, ಕೋಯಿಕ್ಕೋಡ್ ಜಿಲ್ಲೆಯ 43 ವರ್ಷದ ವ್ಯಕ್ತಿಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದೆ.
ಪ್ರಾಥಮಿಕ ಪರೀಕ್ಷೆಯಲ್ಲಿ ನಿಫಾ ಸೋಂಕಿನ ಲಕ್ಷಣಗಳು ಕಂಡುಬ0ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದ್ದು, ಅಂತಿಮ ದೃಢೀಕರಣಕ್ಕಾಗಿ ರೋಗಿಯ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಅಂತಿಮ ವರದಿ ಶೀಘ್ರದಲ್ಲೇ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಉದ್ಯಮಿಯಾಗಿರುವ ರೋಗಿ ಮೊದಲಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಹರಡುವಿಕೆಯನ್ನು ತಡೆಯುವ ಉದ್ದೇಶದಿಂದ ರೋಗಿಯ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಪ್ರತ್ಯೇಕಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಆರಂಭಿಸಿದೆ. ಆರೋಗ್ಯ ಸಿಬ್ಬಂದಿ ಸೇರಿದಂತೆ ನಿಕಟ ಸಂಪರ್ಕದಲ್ಲಿದ್ದವರಿಗೆ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…