ಗ್ಯಾಸ್ ಸಿಲಿಂಡರ್‌ಗಳ ನಿರಂತರ ಬೆಲೆ ಏರಿಕೆ ಹಾಗೂ ವಿತರಣೆಯಲ್ಲಿ ಉಂಟಾಗುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ, ವಿಮೆನ್ ಇಂಡಿಯಾ ಮೂವ್‌ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಬಿಸಿರೋಡ್ ಫ್ಲೈಓವರ್ ಕೆಳಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.
ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿ, ಗೃಹಬಳಕೆಯ ಗ್ಯಾಸ್ ದರವನ್ನು ಕಡಿಮೆಗೊಳಿಸುವಂತೆ ಹಾಗೂ ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ಸಿಲಿಂಡರ್ ವಿತರಣೆ ಮಾಡುವಂತೆ ಆಗ್ರಹಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಂ ಮಾತನಾಡಿ ,
ಕೇಂದ್ರ ಬಿಜೆಪಿ ಸರ್ಕಾರವು ಮಹಿಳೆಯರ ,ಬಡವರ ಶೋಷಣೆಯೇ ದೇಶದ ಅಭಿವೃದ್ದಿ ಎಂದು ಪರಿಗಣಿಸಿದೆ. ನಿರಂತರವಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಜನವಿರೋಧಿ ಆಡಳಿತ ನಡೆಸುತ್ತಿರುವ ಮೋದಿ ಸರ್ಕಾರಕ್ಕೆ ಅಧಿಕಾರದಲ್ಲಿರಲು ಯಾವ ಅರ್ಹತೆಯೂ ಇಲ್ಲ
ಎಂದು ಆಕ್ರೋಶ ವ್ಯಕ್ತಪಡಿಸಿದರು.
ಝೀನತ್ ಗೂಡಿನಬಳಿ ಮಾತನಾಡಿ , ವಿಶ್ವ ಗುರುವಿನ ಟೈಟಲ್ ನಲ್ಲಿ ಮೋದಿ ಸರ್ಕಾರವು ಕಾರ್ಪೋರೇಟ್ ಕುಲಗಳನ್ನು ಅಭಿವೃದ್ದಿಗೊಳಿಸಿ ಬಡವರನ್ನು ಮತ್ತಷ್ಟು ಬಡತನಕ್ಕೆ ತಳ್ಳುವ ವಂಚನೆಯ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು .
ಮಹಿಳೆಯರು ಬ್ಯಾನರ್ ಹಾಗೂ ಫಲಕಗಳನ್ನು ಪ್ರದರ್ಶಿಸಿ, ಗ್ಯಾಸ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಬದುಕಿನ ಮೇಲೆ ಭಾರೀ ಹೊರೆ ಬೀಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಬೆಲೆ ನಿಯಂತ್ರಣ ಮತ್ತು ಸುಗಮ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…