ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟಲು ಎಲ್ಲಾ ನೀರಿನ ಮೂಲಗಳನ್ನು ನಿರಂತರವಾಗಿ ಪರೀಕ್ಷೆಗೆ ಒಳಪಡಿಸುವುದು ಅಗತ್ಯ ಎಂದು ತಿಳಿಸಿದರು.
ಶಾಲೆ ಹಾಗೂ ಅಂಗನವಾಡಿಗಳಲ್ಲಿ ಬಳಕೆಯಲ್ಲಿರುವ ನೀರಿನ ಟ್ಯಾಂಕ್‌ಗಳ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಬೇಕು. ಟ್ಯಾಂಕ್‌ಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವ ಮೂಲಕ ಮಕ್ಕಳಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಒದಗಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಜಲಜೀವನ್ ಮಿಷನ್ ಸೇರಿದಂತೆ ವಿವಿಧ ಕುಡಿಯುವ ನೀರು ಸರಬರಾಜು ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದ ಸಿಇಒ, ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಅವರು ಎಚ್ಚರಿಸಿದರು.
ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿರುವ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವುದರ ಜೊತೆಗೆ, ದುರಸ್ತಿಗೆ ಅಗತ್ಯವಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತ್ವರಿತವಾಗಿ ದುರಸ್ತಿಗೊಳಿಸಬೇಕು ಎಂದು ಸೂಚಿಸಿದರು. ಅಲ್ಲದೆ, ಪ್ರತಿಯೊಂದು ಕುಡಿಯುವ ನೀರಿನ ಮೂಲದಿಂದ ಕಡ್ಡಾಯವಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ, ಜನರಿಗೆ ನಿರಂತರವಾಗಿ ಶುದ್ಧ ನೀರು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ನೀರು ಸರಬರಾಜು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…