ಕಾಮಗಾರಿಯ ವೇಳೆ ರಸ್ತೆಯಲ್ಲಿ ರಾಶಿ ಹಾಕಲಾಗಿದ್ದ ಕಾಂಕ್ರೀಟ್ ತುಂಡುಗಳನ್ನು ತೆರವು ಗೊಳಿಸದೆ ಇರುವುದೇ ಕಾರು ಅಪಘಾತಕ್ಕೆ ಕಾರಣವಾಗಿ ಜೀವಹೋಗಿದೆ ಎಂದು ಆರೋಪ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಅಡಿಸನಲ್ ಎಸ್.ಪಿ.ಅನಿಲ್ ಎಸ್.ಭೂಮರೆಡ್ಡಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಗಡಿಯಾರದಲ್ಲಿ ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ ಕಾರು ಪಲ್ಟಿಯಾಗಿ ಚಾಲಕ ಮೃತಪಟ್ಟಿದ್ದ. ಘಟನೆ ನಡೆದ ಬಳಿಕ ಅಪಘಾತದಲ್ಲಿ ಚಾಲಕ ಸಾವನ್ನಪ್ಪಲು ರಸ್ತೆಯಲ್ಲಿ ಹಾಕಲಾದ ಸಿಮೆಂಟ್ ಬ್ಲಾಕ್‌ಗಳು ಕಾರಣವಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಪಗಳು ವ್ಯಕ್ತವಾಗಿದ್ದವು.
ಅದಾಗಿ ಎರಡನೇ ದಿನಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ರಸ್ತೆ ದಾಟಿ ಹೋಗುತ್ತಿದ್ದ ಪಾದಾಚಾರಿ ಸೈಯದ್ ರಿಯಾಜ್ ಎಂಬವರಿಗೆ ಕಾರೊಂದು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕೂಡ ನಡೆದಿದೆ. ಎರಡು ಘಟನಾ ಸ್ಥಳಗಳಿಗೆ ಅಡಿಸನಲ್ ಎಸ್. ಪಿ.ಅನಿಲ್ ಎಸ್.ಭೂಮರೆಡ್ಡಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಂಟ್ವಾಳ ಟ್ರಾಫಿಕ್ ಎಸ್.ಐ.ಆದರ್ಶ್ ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…