ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಮೃತರನ್ನು ಬಿಜಿಎಸ್ ಕಾಲೇಜಿನ ನಾಲ್ಕನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಾದ ಅತುಲ್ ಸಿ.ಬಿ. ಹಾಗೂ ಗೌರಿ ಶಂಕರ್ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ಸುಮಾರು 2 ಗಂಟೆ ವೇಳೆಗೆ ಕೆಂಗೇರಿಯ ಆರ್.ಆರ್. ದಂತ ಕಾಲೇಜು ಸಮೀಪ ಈ ದುರ್ಘಟನೆ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದ್ದು, ಪರೀಕ್ಷೆಯ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು. ಈ ಕುರಿತು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…