ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳದ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲ್ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಉದಯ್ ಶೆಟ್ಟಿ ಅವರು, ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ವತಿಯಿಂದ “ತುಳು ಅಭಿವೃದ್ಧಿ ಪ್ರಾಧಿಕಾರ”ವನ್ನು ಶೀಘ್ರವಾಗಿ ಸ್ಥಾಪಿಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇನೆ. ತುಳು ಭಾಷೆಯು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಪ್ರಾಚೀನ ದ್ರಾವಿಡ ಭಾಷೆಯಾಗಿದ್ದು, ಲಕ್ಷಾಂತರ ಜನರ ಮಾತೃಭಾಷೆಯಾಗಿದೆ. ತುಳು ಭಾಷೆಯು ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಜೀವನ ಶೈಲಿಯ ಅವಿಭಾಜ್ಯ ಅಂಗವಾಗಿದೆ. ಜಾಗತೀಕರಣದ ಪರಿಣಾಮವಾಗಿ ಪ್ರಾದೇಶಿಕ ಭಾಷೆಗಳ ಬಳಕೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ತುಳು ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯತೆ ಹೆಚ್ಚಾಗಿದೆ ಎಂದರು.

ಈಗಾಗಲೇ ಯುನೆಸ್ಕೋ ಸಹ ತುಳು ಭಾಷೆಯನ್ನು ಸಂರಕ್ಷಿಸಬೇಕಾದ ಭಾಷೆಗಳ ಪೈಕಿ ಪರಿಗಣಿಸಿರುವ ಹಿನ್ನೆಲೆಯಲ್ಲಿ, ತುಳು ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ವಿಶೇಷ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಆದ್ದರಿಂದ ತುಳು ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ತುಳು ಭಾಷೆಯ ಸಂರಕ್ಷಣೆ ಮತ್ತು ಪ್ರಚಾರ, ತುಳು ಸಾಹಿತ್ಯ, ಸಂಶೋಧನೆ ಹಾಗೂ ಪ್ರಕಟಣೆಗಳಿಗೆ ಉತ್ತೇಜನ, ಶಾಲೆ ಮತ್ತು ಕಾಲೇಜುಗಳಲ್ಲಿ ತುಳು ಅಧ್ಯಯನಕ್ಕೆ ಹೆಚ್ಚಿನ ಪ್ರೋತ್ಸಾಹ, ತುಳು ಜಾನಪದ ಕಲೆ, ಯಕ್ಷಗಾನ, ಭೂತಾರಾಧನೆ ಹಾಗೂ ಇತರ ಸಾಂಸ್ಕೃತಿಕ ಪರಂಪರೆಗಳ ಸಂರಕ್ಷಣೆ, ತುಳು ಭಾಷೆಗೆ ಸಂವಿಧಾನಿಕ ಹಾಗೂ ಶೈಕ್ಷಣಿಕ ಮಾನ್ಯತೆ ದೊರಕುವಂತೆ ಕ್ರಮ ಕೈಗೊಳ್ಳುವುದು, ತುಳುನಾಡಿನ ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಗೆ ನೆರವು ನೀಡುವಂತೆ ಮನವಿ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನಲ್ಲಿ ತುಳು ಭವನ ನಿರ್ಮಾಣ ಮಾಡುವ ಕುರಿತು ಮನವಿ ಮಾಡಿಕೊಂಡಿದ್ದು, ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಸುಸಜ್ಜಿತ ತುಳು ಭವನ ನಿರ್ಮಾಣ ಅಗತ್ಯವಾಗಿದೆ. ಕಾರ್ಕಳವು ತುಳುನಾಡಿನ ಪ್ರಮುಖ ಸಾಂಸ್ಕೃತಿಕ ಕೇಂದ್ರಗಳಲ್ಲಿ ಒಂದಾಗಿದ್ದು, ಇಲ್ಲಿ ತುಳು ಭಾಷೆ, ಯಕ್ಷಗಾನ, ಭೂತಾರಾಧನೆ, ನಾಗಾರಾಧನೆ ಹಾಗೂ ಇತರ ಜನಪದ ಕಲೆಗಳು ಇಂದಿಗೂ ಜೀವಂತವಾಗಿವೆ. ತುಳು ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆ, ಅಧ್ಯಯನ ಮತ್ತು ಪ್ರಚಾರಕ್ಕಾಗಿ ಕಾರ್ಕಳದಲ್ಲಿ ತುಳು ಭವನದ ಅಗತ್ಯವಿದೆ. ಪ್ರಸ್ತಾವಿತ ತುಳು ಭವನದಲ್ಲಿ ಗ್ರಂಥಾಲಯ, ಸಂಶೋಧನಾ ಕೇಂದ್ರ, ಸಭಾಂಗಣ, ವಸ್ತುಸಂಗ್ರಹಾಲಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬಹುದಾಗಿದೆ. ಇದರಿಂದ ತುಳು ಭಾಷೆ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ. ಆದ್ದರಿಂದ, ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನಲ್ಲಿ ಸರ್ಕಾರದ ವತಿಯಿಂದ ಸೂಕ್ತ ಜಾಗವನ್ನು ಗುರುತಿಸಿ, ಅಗತ್ಯ ಅನುದಾನವನ್ನು ಮಂಜೂರು ಮಾಡಿ ಶೀಘ್ರದಲ್ಲೇ ತುಳು ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಉದಯ್ ಶೆಟ್ಟಿ ಮುನಿಯಾಲ್ ಅವರು ನೂತನ ಮುಖ್ಯಮಂತ್ರಿಗಳಿಗೆ ಮೂಲಕ ಮನವಿ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!