ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33) ಎಂಬಾತನನ್ನು ಪಿಐಟಿ-ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದಲ್ಲಿ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಬಂಧನ ಆದೇಶ ಹೊರಡಿಸಿದ್ದು, ಅದರಂತೆ ಜೂನ್ 12ರಂದು ಆರೋಪಿಯನ್ನು ಬಂಧಿಸಲಾಗಿದೆ. ಜಗದೀಶ ಪೂಜಾರಿ ವಿರುದ್ಧ ಮಣಿಪಾಲ ಹಾಗೂ ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳು ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದ ಎರಡು ಪ್ರಕರಣಗಳು ದಾಖಲಾಗಿವೆ. ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಒಂದು ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದ್ದು, ಉಳಿದ ಎರಡು ಪ್ರಕರಣಗಳು ತನಿಖೆಯ ಹಂತದಲ್ಲಿವೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!