ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33) ಎಂಬಾತನನ್ನು ಪಿಐಟಿ-ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದಲ್ಲಿ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು ಬಂಧನ ಆದೇಶ ಹೊರಡಿಸಿದ್ದು, ಅದರಂತೆ ಜೂನ್ 12ರಂದು ಆರೋಪಿಯನ್ನು ಬಂಧಿಸಲಾಗಿದೆ. ಜಗದೀಶ ಪೂಜಾರಿ ವಿರುದ್ಧ ಮಣಿಪಾಲ ಹಾಗೂ ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳು ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದ ಎರಡು ಪ್ರಕರಣಗಳು ದಾಖಲಾಗಿವೆ. ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಒಂದು ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದ್ದು, ಉಳಿದ ಎರಡು ಪ್ರಕರಣಗಳು ತನಿಖೆಯ ಹಂತದಲ್ಲಿವೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು…
ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಬಿಜಿಎಸ್…
ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ…
ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್…
ತಂದೆ ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಹಗಲು ಹೊತ್ತಿನಲ್ಲಿ ಮನೆಯಿಂದ ಮಗಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ…