ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪ ವ್ಯಕ್ತಪಡಿಸಿದ್ದಾರೆ.
ಹೆದ್ದಾರಿ ಕಾಮಗಾರಿಯ ವೇಳೆ ಅಗೆದಿರುವ ರಸ್ತೆಗೆ ಕಾಂಕ್ರೀಟ್ ಹಾಕದೆ ಇರುವ ಕಾರಣದಿಂದ ಮಳೆಗಾಲ ಆರಂಭದಲ್ಲೇ ಬೃಹತ್ ಗಾತ್ರದ ಹೊಂಡಗುಂಡಿಗಳಲ್ಲಿ ಕೆಸರು ನೀರು ತುಂಬಿದೆ. ಹೊಂಡದಲ್ಲಿ ಬಿದ್ದ ವಾಹನಗಳು ಮತ್ತೆ ಎದ್ದೇಳಲು ಸಾಧ್ಯವಾಗದೆ ಹರಸಾಹಸ ಪಡುವ ದೃಶ್ಯಗಳು ಕಂಡುಬಂದಿವೆ.
ದ್ವಿಚಕ್ರವಾಹನ ಸವಾರರಂತೂ ರಾತ್ರಿ ವೇಳೆ ಗುಂಡಿಗೆ ಬಿದ್ದು ಪ್ರಾಣಕ್ಕೆ ಅಪಾಯವಾಗುವ ಸಂಭವಗಳು ಜಾಸ್ತಿ ಇವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡು ಕೆಲಸ ನಿರ್ವಹಿಸುವ ಕೆಎನ್‌ಆರ್‌ಸಿ ಕಂಪೆನಿಯ ಪ್ರಮುಖರಲ್ಲಿ ಅನೇಕ ಬಾರಿ ಹೇಳಿದರು ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪ ಮಾಡಿದ್ದಾರೆ. ಮಳೆಗಾಲವಾದ್ದರಿಂದ ಗುಂಡಿಗಳಿಗೆ ಬಿದ್ದು ಜೀವಕ್ಕೆ ಅಪಾಯವಾಗುವ ಮುನ್ನ ಸಂಬಂಧಿಸಿದ ಇಲಾಖೆ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಲು ಸ್ಥಳೀಯರು ಮನವಿ ಮಾಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…