ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ.
ರಾತ್ರಿ ವೇಳೆ ಅಕ್ರಮವಾಗಿ ಹೋರಿಗಳನ್ನು ಪಿಕಪ್ ನಲ್ಲಿ ಸಾಗಿಸಲಾಗಿದ್ದು, ಪಿಕಪ್ ಕುಲ್ಕುಂದ ದಾಟಿ ಹೋಗುತ್ತಿದ್ದಾಗ ತಿರುವೊಂದರಲ್ಲಿ ಪಲ್ಟಿ ಹೊಡೆದಿದೆ. ಪಿಕಪ್‌ನಲ್ಲಿ ಎರಡು ಹೋರಿಗಳಿದ್ದು ಅದರ ಕಾಲು ಕೈ ಕಟ್ಟಿ ಹಾಕಲಾಗಿತೆನ್ನಲಾಗಿದೆ. ಪಿಕಪ್ ಪಲ್ಟಿ ಹೊಡೆದ ಬಳಿಕ ಎತ್ತುಗಳನ್ನು ಕೈಕಾಲು ಬಿಡಿಸಿ ಬಿಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರಕಲಗೂಡು ಮೂಲದ ಚಂದ್ರಶೇಖರ ಮತ್ತು ಮೋಹನ್ ಗೋ ಸಾಗಾಟ ಮಾಡಿರುವುದಾಗಿ ತಿಳಿದು ಬಂದಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…