ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ.

ಬಿಸಿರೋಡಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಇರುವ ನಾಗರಾಜ್ ಎಂಬವರಿಗೆ ಸೇರಿದ ನಾಗ ಕ್ಯಾಂಟೀನ್‌ನ ಹಿಂಬದಿಯಲ್ಲಿ ದೋಸೆ ಮಾಡಲು ಇರಿಸಲಾಗಿದ್ದ ಅಡುಗೆ ಅನಿಲದಲ್ಲಿ ಸೋರಿಕೆ ಕಂಡು ಬಂದು ಬೆಂಕಿ ಕಾಣಿಸಿಕೊಂಡಿದೆ. ದೋಸೆ ಮಾಡುತ್ತಿದ್ದ ಕ್ಯಾಂಟೀನ್‌ನ ಕೆಲಸಗಾರ ವಿಶ್ವನಾಥ ಎಂಬವರಿಗೆ ಅನಿಲ ಸೋರಿಕೆಯಿಂದ ತಗುಲಿಗೊಂಡ ಬೆಂಕಿಗೆ ಸ್ವಲ್ಪ ಮಟ್ಟಿಗೆ ಗಾಯವಾಗಿದೆ. ಇದರ ಜೊತೆಗೆ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ ಮಾಲಕನ ಸಹೋದರ ಹರೀಶ್ ಎಂಬವರಿಗೂ ಅಲ್ಪಸ್ವಲ್ಪ ಗಾಯಗಳಾಗಿದ್ದು, ಸ್ವಲ್ಪದರದಲ್ಲಿ ಅತ್ಯಂತ ದೊಡ್ಡ ಅನಾಹುತ ತಪ್ಪಿದೆ. ಬೆಳಿಗ್ಗೆ ಹೊತ್ತಿಗೆ ಕ್ಯಾಂಟೀನ್‌ಗೆ ನೂರಾರು ಜನ ಗ್ರಾಹಕರು ಬರುವ ಸಮಯ ಮತ್ತು ಹತ್ತಿರದಲ್ಲಿ ರಕ್ತೇಶ್ವರಿ ದೇವಸ್ಥಾನ, ಅನೇಕ ಸರಕಾರಿ ಕಚೇರಿಗಳು ಹೀಗೆ ಕೋಟ್ಯಾಂತರ ಬೆಲೆ ಬಾಳುವ ಸುತ್ತಲಿನ ಜಾಗವಾಗಿದ್ದು, ಸದ್ಯ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಗ್ಯಾಸ್ ಸೋರಿಕೆಯಿಂದ ಬೆಂಕಿಯನ್ನು ಕೂಡಲೇ ಸ್ಥಳೀಯರು ನಂದಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕೊನೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಅಪಾಯ ತಪ್ಪಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!