ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ.
ಬಿಸಿರೋಡಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಇರುವ ನಾಗರಾಜ್ ಎಂಬವರಿಗೆ ಸೇರಿದ ನಾಗ ಕ್ಯಾಂಟೀನ್‌ನ ಹಿಂಬದಿಯಲ್ಲಿ ದೋಸೆ ಮಾಡಲು ಇರಿಸಲಾಗಿದ್ದ ಅಡುಗೆ ಅನಿಲದಲ್ಲಿ ಸೋರಿಕೆ ಕಂಡು ಬಂದು ಬೆಂಕಿ ಕಾಣಿಸಿಕೊಂಡಿದೆ. ದೋಸೆ ಮಾಡುತ್ತಿದ್ದ ಕ್ಯಾಂಟೀನ್‌ನ ಕೆಲಸಗಾರ ವಿಶ್ವನಾಥ ಎಂಬವರಿಗೆ ಅನಿಲ ಸೋರಿಕೆಯಿಂದ ತಗುಲಿಗೊಂಡ ಬೆಂಕಿಗೆ ಸ್ವಲ್ಪ ಮಟ್ಟಿಗೆ ಗಾಯವಾಗಿದೆ. ಇದರ ಜೊತೆಗೆ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ ಮಾಲಕನ ಸಹೋದರ ಹರೀಶ್ ಎಂಬವರಿಗೂ ಅಲ್ಪಸ್ವಲ್ಪ ಗಾಯಗಳಾಗಿದ್ದು, ಸ್ವಲ್ಪದರದಲ್ಲಿ ಅತ್ಯಂತ ದೊಡ್ಡ ಅನಾಹುತ ತಪ್ಪಿದೆ. ಬೆಳಿಗ್ಗೆ ಹೊತ್ತಿಗೆ ಕ್ಯಾಂಟೀನ್‌ಗೆ ನೂರಾರು ಜನ ಗ್ರಾಹಕರು ಬರುವ ಸಮಯ ಮತ್ತು ಹತ್ತಿರದಲ್ಲಿ ರಕ್ತೇಶ್ವರಿ ದೇವಸ್ಥಾನ, ಅನೇಕ ಸರಕಾರಿ ಕಚೇರಿಗಳು ಹೀಗೆ ಕೋಟ್ಯಾಂತರ ಬೆಲೆ ಬಾಳುವ ಸುತ್ತಲಿನ ಜಾಗವಾಗಿದ್ದು, ಸದ್ಯ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಗ್ಯಾಸ್ ಸೋರಿಕೆಯಿಂದ ಬೆಂಕಿಯನ್ನು ಕೂಡಲೇ ಸ್ಥಳೀಯರು ನಂದಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕೊನೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಅಪಾಯ ತಪ್ಪಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…