ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ (ರಿ.) ಇದರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಇಂದು ದಿನಾಂಕ 30-07-2023 ರಂದು ನಿಟ್ಟೂರು ಶ್ರೀ ಸೋಮನಾಥೇಶ್ವರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ ರಿ. ಅಧ್ಯಕ್ಷರಾದ ನಿಟ್ಟೂರು ಗೋಕುಲ ಆಚಾರ್ಯ, ಗೌರವಾಧ್ಯಕ್ಷರಾದ ಬಳ್ಕೂರು ಡಾl. ಗೋಪಾಲ ಆಚಾರ್ಯ, ಸೋಮನಾಥೇಶ್ವರ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾದ ಗಂಗಾಧರ ಆಚಾರ್ಯ ದಿಂಡಿಬೆಟ್ಟು, ಸ್ಥಳೀಯ ನಗರಸಭಾ ಸದಸ್ಯರಾದ ಸಂತೋಷ್ ಜತ್ತನ್, ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ ರಿ. ಕಾನೂನು ಸಲಹೆಗಾರರಾದ ಗಂಗಾಧರ ಎಚ್.ಎಂ, ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ ರಿ. ಹಿರಿಯ ಸದಸ್ಯರಾದ ಶಾಂತಾರಾಮ್ ಆಚಾರ್ಯ ಹೆಜಮಾಡಿ, ಉಡುಪಿ ಜಿಲ್ಲಾ ವಿಶ್ವಕರ್ಮ ಕಾರ್ಪೆಂಟರ್ಸ್ ಯೂನಿಯನ್ ರಿ. ಕಾರ್ಯದರ್ಶಿಗಳಾದ ಜಯಕರ ಬೈಲೂರು, ಕೋಶಾಧಿಕಾರಿಗಳಾದ ವಸಂತ ಆಚಾರ್ಯ ಉಪಸ್ಥಿತರಿದ್ದರು.






