ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

 

ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಅತ್ಯಂತ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಸಜಿಪ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಹಮದ್ ಆಸೀರ್ ಮೃತಪಟ್ಟ ದುರ್ದೈವಿ ಆಕ್ಟಿವಾ ಸವಾರರಾಗಿದ್ದಾರೆ. ಅಹಮದ್ ಆಸೀರ್ ಅವರು ತನ್ನ ಮನೆಯಿಂದ ಸುಮಾರು ಒಂದು ಕಿಲೋ ಮೀಟರ್ ದೂರದಲ್ಲಿರುವ ಸಜಿಪ ಬೇಂಕೆ ಎಂಬ ಪ್ರದೇಶಕ್ಕೆ ಆಕ್ಟಿವಾ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಮಾರುತಿ ಕಾರು ಇವರ ದ್ವಿಚಕ್ರ ವಾಹನಕ್ಕೆ ನೇರವಾಗಿ ಮತ್ತು ಪ್ರಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಆಕ್ಟಿವಾ ವಾಹನವು ಗುರುತು ಸಿಗದಷ್ಟು ಸಂಪೂರ್ಣವಾಗಿ ಜಖಂಗೊ0ಡಿದೆ. ಅಪಘಾತದ ತಕ್ಷಣವೇ ತಲೆ ಮತ್ತು ದೇಹಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ಆಸೀರ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಭೀಕರ ಅಪಘಾತಕ್ಕೆ ಸಂಬ0ಧಿಸಿದ0ತೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!