ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಅತ್ಯಂತ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಸಜಿಪ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಹಮದ್ ಆಸೀರ್ ಮೃತಪಟ್ಟ ದುರ್ದೈವಿ ಆಕ್ಟಿವಾ ಸವಾರರಾಗಿದ್ದಾರೆ. ಅಹಮದ್ ಆಸೀರ್ ಅವರು ತನ್ನ ಮನೆಯಿಂದ ಸುಮಾರು ಒಂದು ಕಿಲೋ ಮೀಟರ್ ದೂರದಲ್ಲಿರುವ ಸಜಿಪ ಬೇಂಕೆ ಎಂಬ ಪ್ರದೇಶಕ್ಕೆ ಆಕ್ಟಿವಾ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಮಾರುತಿ ಕಾರು ಇವರ ದ್ವಿಚಕ್ರ ವಾಹನಕ್ಕೆ ನೇರವಾಗಿ ಮತ್ತು ಪ್ರಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಆಕ್ಟಿವಾ ವಾಹನವು ಗುರುತು ಸಿಗದಷ್ಟು ಸಂಪೂರ್ಣವಾಗಿ ಜಖಂಗೊ0ಡಿದೆ. ಅಪಘಾತದ ತಕ್ಷಣವೇ ತಲೆ ಮತ್ತು ದೇಹಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ಆಸೀರ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಭೀಕರ ಅಪಘಾತಕ್ಕೆ ಸಂಬ0ಧಿಸಿದ0ತೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.
ಬಸ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…