ಕರಾವಳಿ

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು ಸೇರ್ಪಡೆಗೊಳಿಸಿದ್ದಾರೆ.

ಆತಿಥ್ಯೋದ್ಯಮ, ರಿಯಲ್ ಎಸ್ಟೇಟ್, ಮಾಹಿತಿ ತಂತ್ರಜ್ಞಾನ ಮೂಲಸೌಕರ್ಯ ನಿರ್ಮಾಣ ಕ್ಷೇತ್ರ ಸಹಿತ ವೈವಿಧ್ಯಮಯ ಉದ್ಯಮಗಳಲ್ಲಿ ತೊಡಗಿಸಿಕೊಂಡಿರುವ ಡಾ.ಪ್ರಕಾಶ್ ಶೆಟ್ಟಿ ಅವರು ಖಾಸಗಿ ವಿಮಾನ ಹೊಂದಿರುವ ಕರ್ನಾಟಕ ಕರಾವಳಿಯ ಉದ್ಯಮಿಗಳಲ್ಲಿ ಮೊದಲಿಗರು.

ಅಮೆರಿಕದಿಂದ ತರಿಸಲಾದ 14 ಆಸನಗಳ ಎಂಬ್ರೇಯರ್ ಲೆಗಸಿ 650 ಖಾಸಗಿ ವಿಮಾನವನ್ನು ಎಂಆರ್‌ಜಿ ಕುಟುಂಬಕ್ಕೆ ವಿಧ್ಯುಕ್ತವಾಗಿ ಸೇರ್ಪಡೆಗೊಳಿಸುವ ಸಮಾರಂಭ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಿತು. ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಕುಟುಂಬ ಸದಸ್ಯರು, ಆಪ್ತರು ಹಾಗೂ ಹಿತೈಷಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ವಿನಯ, ಪರಿಶ್ರಮ ಮತ್ತು ದೂರದೃಷ್ಟಿಯೊಂದಿಗೆ ಎಂ.ಆರ್.ಜಿ. ಉದ್ಯಮ ಸಮೂಹವನ್ನು ಕಟ್ಟಿ ಬೆಳೆಸಿದ ಡಾ. ಪ್ರಕಾಶ್ ಶೆಟ್ಟಿ ಅವರು ಯಶಸ್ವಿ ಉದ್ಯಮಿಯಾಗಿರುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳು ಮತ್ತು ದಾನಧರ್ಮಗಳ ಮೂಲಕವೂ ಹೆಸರುವಾಸಿಯಾಗಿದ್ದಾರೆ. ವರ್ಷಂಪ್ರತಿ ಮಂಗಳೂರಿನಲ್ಲಿ ಸಹಾಯ ಹಸ್ತ ನೆರವು ಕಾರ್ಯಕ್ರಮದ ಮೂಲಕ ಸಮಾಜದಲ್ಲಿರುವ ಸೌಲಭ್ಯವಂಚಿತರ ಮುಖದಲ್ಲಿ ಸಂತೋಷ ಮೂಡಿಸುವ ಯಶಸ್ವೀ ಪ್ರಯತ್ನವನ್ನು ಅವರು ನಡೆಸುತ್ತಿದ್ದಾರೆ.

ಇದು ಸಾಮಜಿಕ ಪರಿವರ್ತನೆಗೂ ಕಾರಣವಾಗಿದೆ. ಎಂ.ಆರ್.ಜಿ. ಗುಂಪು ದೇಶದ ವಿವಿಧ ಭಾಗಗಳಲ್ಲಿ ಹೋಟೆಲ್‌ಗಳು ಹಾಗೂ ವಿವಿಧ ಉದ್ಯಮಗಳ ಮೂಲಕ ವಿಸ್ತಾರಗೊಂಡಿದ್ದು, ಈ ಹೊಸ ಸೇರ್ಪಡೆ ಸಂಸ್ಥೆಯ ಬೆಳವಣಿಗೆ ಹಾಗೂ ಜಾಗತಿಕ ದೃಷ್ಟಿಕೋನದ ಪ್ರತೀಕವಾಗಿದೆ ಎಂದು ಸಂಸ್ಥೆಯ ಅಧಿಕೃತ ಹೇಳಿಕೆ ತಿಳಿಸಿದೆ. ದೀರ್ಘ ದೂರದ ಪ್ರಯಾಣ ಸಾಮರ್ಥ್ಯ ಮತ್ತು ಅತ್ಯಾಧುನಿಕ ಸೌಲಭ್ಯಗಳಿಗೆ ಹೆಸರಾದ ಎಂಬ್ರೇಯರ್ ಲೆಗಸಿ 650 ವಿಮಾನವು ಎಂಆರ್‌ಜಿ ಸಮೂಹದ ವ್ಯಾಪಾರ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಹಾಗೂ ಸಂಪರ್ಕ ಸಾಮರ್ಥ್ಯವನ್ನು ಒದಗಿಸಲಿದೆ. ಪರಂಪರೆ, ಮೌಲ್ಯಗಳು ಮತ್ತು ಆಧುನಿಕ ದೃಷ್ಟಿಕೋನದ ಸಮನ್ವಯದೊಂದಿಗೆ ಸಾಗುತ್ತಿರುವ ಡಾ. ಕೆ. ಪ್ರಕಾಶ್ ಶೆಟ್ಟಿ ಅವರ ಸಾಧನೆಯ ಪಯಣದಲ್ಲಿ ಇದು ಮತ್ತೊಂದು ಸ್ಮರಣೀಯ ಅಧ್ಯಾಯವಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

14 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

15 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

15 hours ago

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…

18 hours ago

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…

19 hours ago

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…

19 hours ago