ಕರಾವಳಿ

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು ಎದುರಿಸುತ್ತಿದೆ ಎಂಬ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಬಂಟ್ವಾಳ ತಾಲೂಕಿನ ಎಲಿಯನಡುಗೋಡು ಹಾಗೂ ನೇರಳಕಟ್ಟೆ ಎಲ್.ಪಿ.ಶಾಲೆಗಳು ಯಾವುದೇ ದಾಖಲಾತಿ ಇಲ್ಲದೆ ಶೂನ್ಯವಾಗಿದೆ. ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ಮಕ್ಕಳಿಲ್ಲದೆ ಇದೀಗ ಶಾಲೆ ಮುಚ್ಚುವ ಹಂತದಲ್ಲಿದೆ. ಕನ್ನಡ ಮತ್ತು ಸರಕಾರಿ ಶಾಲೆ ಉಳಿಸಬೇಕು ಎಂಬ ಕೂಗು ಒಂದೆಡೆಯಿಂದ ಇನ್ನೊಂದೆಡೆಗೆ ಇಂಗ್ಲಿಷ್ ಭಾಷೆಯ ಶಿಕ್ಷಣಕ್ಕೆ ಒತ್ತು ನೀಡಬೇಕು ಮತ್ತು ಅವಕಾಶ ನೀಡಬೇಕು ಎಂದು ಹೋರಾಟಗಳ ನಡುವೆ ಖಾಸಗಿ ಪ್ರಾಬಲ್ಯಕ್ಕೆ ಜಿಲ್ಲೆಯ ಸುಮಾರು 20 ಶಾಲೆಗಳು ಶೂನ್ಯ ದಾಖಲಾತಿಯಲ್ಲಿದೆ. ಶಾಲೆ ಪ್ರಾರಂಭವಾಗಿ ದಿನ 20 ಕಳೆದರೂ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಇಲ್ಲದೆ ಶೂನ್ಯವಾಗಿರುವ ಶಾಲೆಗಳ ಸ್ಥಿತಿ ಕೊನೆಗೆ ಬೀಗ ಹಾಕುವಂತೆ ಸರಕಾರ ಆದೇಶ. ಇದು ಬಹಳ ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಲಾಗುತ್ತಿದೆ. ಸರಕಾರ ಈ ಬಾರಿ ಸರಕಾರಿ ಶಾಲೆಯ ದಾಖಲಾತಿ ಹೆಚ್ಚಿಸಲು ದಾಖಲಾತಿ ಅಂದೋಲನ ಎಂಬ ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ ಆಂದೋಲನದ ಭಾಗವಾಗಿ ಕೂಡ ತಾಲೂಕಿನ ಎರಡು ಶಾಲೆಗಳು ಶೂನ್ಯವಾಗಿದೆ ಎಂಬ ವಿಚಾರ ಆತಂಕವನ್ನು ಹೆಚ್ಚಿಸಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…

44 mins ago

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…

1 hour ago

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…

1 hour ago

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

18 hours ago

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…

19 hours ago

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

  ಬಸ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…

1 day ago