ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ ಬಳಿ ನಡೆದಿದೆ.
ಪಿಲಾರು ಮಹಾಲಕ್ಷ್ಮಿ ಮಂದಿರದ ಬಳಿಯ ವಿದ್ಯುತ್ ಕಂಬದ ತಂತಿಯಲ್ಲಿ ಕುಳಿತ ಹೆಣ್ಣು ನವಿಲಿಗೆ ವಿದ್ಯುತ್ ಪ್ರವಹಿಸಿ ಕೆಳಗೆಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದೆ. ನವಿಲು ಸಾವನ್ನಪ್ಪಿರುವುದನ್ನು ಕಂಡ ಸ್ಥಳೀಯರಾದ ಶೈಲೇಶ್ ಗಟ್ಟಿಯವರು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಕೋಟೆಕಾರು ಉಪವಲಯ ಅರಣ್ಯ ಪಾಲಕರಾದ ರೋಹಿತ್ ಕುಮಾರ್ ಅವರು ನವಿಲಿನ ಕಳೇಬರವನ್ನು ವಿಲೇವಾರಿ ಮಾಡಿದ್ದಾರೆ. ಇತ್ತೀಚಿಗೆ ಅಪಾರ ಸಂಖ್ಯೆಯ ನವಿಲುಗಳು ಆಹಾರ ಅರಸಿ ಕಾಡನ್ನ ಬಿಟ್ಟು ಸಮುದ್ರ ತೀರ ಹಾಗೂ ಜನನಿಬೀಡ ಪ್ರದೇಶಗಳಿಗೆ ಲಗ್ಗೆ ಇಟ್ಟಿದ್ದು, ವಿದ್ಯುತ್ ಕಂಬಗಳ ತಂತಿಗಳಿಂದ ಪ್ರಾಣಾಪಾಯ ಎದುರಿಸುತ್ತಿವೆ.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…