ಕರಾವಳಿ

ಬಂಟ್ವಾಳ: ಅರ್ಭಿ- ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ…!

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಹುಕಾಲದ ಬೇಡಿಕೆಯಾಗಿದ್ದ ಅರಳ ಗ್ರಾಮದ ಅರ್ಭಿ-ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ರೂ.20 ಲಕ್ಷಗಳ ವಿಶೇಷ ಅನುದಾನ ಮಂಜೂರಾಗಿದ್ದು, ಕಾಮಗಾರಿಯ ಉದ್ಘಾಟನೆಯನ್ನು ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರು ನೆರವೇರಿಸಿದ್ದಾರೆ.

ಗ್ರಾಮದ ಜನರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಈ ರಸ್ತೆ ಅಭಿವೃದ್ಧಿಗಾಗಿ ವಿಶೇಷ ಅನುದಾನ ಮಂಜೂರು ಮಾಡಿಸಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಈ ಅನುದಾನವನ್ನು ಮಂಜೂರು ಮಾಡುವಲ್ಲಿ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ವಿಶೇಷ ಆಸಕ್ತಿ ವಹಿಸಿದ್ದು, ಅನುದಾನ ಮಂಜೂರಾತಿಗೆ ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರು ಸಹಕಾರ ನೀಡಿದ್ದಾರೆ.

ಅರ್ಭಿ-ದೆಂಬುಡೆ ರಸ್ತೆ ಕಾಂಕ್ರೀಟೀಕರಣದಿಂದ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದ್ದು, ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಬೇಬಿ ಕುಂದರ್, ಗ್ರಾಮಪಂಚಾಯತ್ ಸದಸ್ಯರು ದೇಜಪ್ಪ ಪೂಜಾರಿ, ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ಕಾಮಗಾರಿ…!

  ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಬಳಿ ಪ್ರವಾಸಿ ತಾಣ, ಸಮಗ್ರ ಅಭಿವೃದ್ಧಿ ಕಾಮಗಾರಿ ಅನಗತ್ಯವಾಗಿ…

8 hours ago

ಉಡುಪಿ: ಕಾಪು ಕೋತಲಕಟ್ಟೆ ಜಂಕ್ಷನ್ ನಲ್ಲಿರುವ ಡೈವರ್ಷನ್ ಬಳಿ ಸರಣಿ ಅಪ*ಘಾತ…!

ಉಡುಪಿ ಜಿಲ್ಲೆಯ ಕಾಪು ಕೋತಲಕಟ್ಟೆ ಜಂಕ್ಷನ್ ನಲ್ಲಿರುವ ಡೈವರ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಣಿ ಅಪಘಾತ ಸಂಭವಿಸಿ…

10 hours ago

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…

4 days ago

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…

4 days ago

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…

4 days ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…

4 days ago