ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಕಾಪು ಕೋತಲಕಟ್ಟೆ ಜಂಕ್ಷನ್ ನಲ್ಲಿರುವ ಡೈವರ್ಷನ್ ಬಳಿ ಸರಣಿ ಅಪ*ಘಾತ…!

ಉಡುಪಿ ಜಿಲ್ಲೆಯ ಕಾಪು ಕೋತಲಕಟ್ಟೆ ಜಂಕ್ಷನ್ ನಲ್ಲಿರುವ ಡೈವರ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಣಿ ಅಪಘಾತ ಸಂಭವಿಸಿ 3 ಕಾರುಗಳು ಜಖಂಗೊಂಡ ಘಟನೆ ಸಂಭವಿಸಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಕಾರು ಕೋತಲಕಟ್ಟೆ ಡಿವೈಡರ್ ಡೈವರ್ಷನ್ ಮೂಲಕ ಹೆದ್ದಾರಿ ಪ್ರವೇಶಿಸಿದ್ದು, ಈ ವೇಳೆ ಉಡುಪಿ ಕಡೆಗೆ ತೆರಳುತ್ತಿದ್ದ ಮತ್ತೊಂದು ಕಾರಿನ ಚಾಲಕ ಅದನ್ನು ತಪ್ಪಿಸಲು ಎಡಕ್ಕೆ ಚಲಾಯಿಸಿದ್ದರು. ಈ ವೇಳೆ ಅದೇ ದಿಕ್ಕಿನಲ್ಲಿ ಉಡುಪಿಗೆ ತೆರಳುತ್ತಿದ್ದ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಅವರ ಕಾರಿಗೆ ಅದು ಢಿಕ್ಕಿ ಹೊಡೆಯಿತೆನ್ನಲಾಗಿದೆ. ಸರಣಿ ಅಪಘಾತದ ಕಾರಣದಿಂದಾಗಿ ಮೂರೂ ಕಾರುಗಳು ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದಾಗಿ ಕೆಲವು ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿದ್ದು ಸ್ಥಳಕ್ಕೆ ಧಾವಿಸಿದ ಕಾಪು ಪೊಲೀಸರು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

Leave a Reply

Your email address will not be published. Required fields are marked *

ಕೊಚ್ಚಿ: ವಿಜೃಂಭಣೆಯ ಕೇರಳ-ಕರ್ನಾಟಕ ಜಾನಪದ ಉತ್ಸವ…!

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

error: Content is protected !!