ಕರಾವಳಿ

ಮಂಗಳೂರು: ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ಕಾಮಗಾರಿ…!

 

ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಬಳಿ ಪ್ರವಾಸಿ ತಾಣ, ಸಮಗ್ರ ಅಭಿವೃದ್ಧಿ ಕಾಮಗಾರಿ ಅನಗತ್ಯವಾಗಿ ವಿಳಂಬವಾಗುತ್ತಿದ್ದು, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಹಾಗೂ ಕಂದಾಯ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ಪಾಲಿಕೆಯಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, ದಲಿತೋದ್ದಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿ ಅಭಿವೃದ್ಧಿಗಾಗಿ 2022ರ ಬಿಜೆಪಿ ಸರ್ಕಾರದ ಅವಧಿಯಲ್ಲೇ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ -1 ಮೂಲಕ 3 ಕೋಟಿ ಅನುದಾನವನ್ನು ಮಂಜೂರುಗೊಳಿಸಲಾಗಿತ್ತು. ನಂತರ ಅದರ ಗುದ್ದಲಿ ಪೂಜೆಯನ್ನೂ ಸಹ ನಾವು ನಡೆಸಿದ್ದೇವೆ. ಆದರೆ ಈವರೆಗೆ ಒಂದಿಲ್ಲೊಂದು ಸಮಸ್ಯೆ ಹೇಳಿಕೊಂಡು, ಎಂದೋ ಪೂರ್ಣಗೊಳ್ಳಬೇಕಿದ್ದ ಕಾರ್ಯವನ್ನು ನಿಲ್ಲಿಸಿರುವುದು ಬೇಸರದ ಸಂಗತಿ. ದಲಿತರ ಕುಂದುಕೊರತೆ ಸಭೆಗಳಲ್ಲೂ ಸಮುದಾಯದ ಮುಖಂಡರು ಪ್ರಸ್ತಾಪಿಸಿದ್ದು ಇದೀಗ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗುತ್ತಿದ್ದು ಶೀಘ್ರದಲ್ಲಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಿ ಎಂದು ಶಾಸಕರು ಸೂಚನೆ ನೀಡಿದರು.

ಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್, ಉಪ ಆಯುಕ್ತರಾದ ನರೇಶ್ ಶೆಣೈ, ತಹಸೀಲ್ದಾರ್ ರಮೇಶ್ ಬಾಬು, ಅರಣ್ಯ ಇಲಾಖೆಯ ರಾಜೇಶ್ ಬಳಿಗಾರ್, ಸಮಾಜ ಕಲ್ಯಾಣ ಇಲಾಖೆಯ ಸುರೇಶ್ ಅಡಿಗ, ಅಧಿಕಾರಿಗಳಾದ ರಾಜೇಶ್, ಪುನೀತ್, ಭವ್ಯ, ಮಾಲಿನಿ, ಶಿವುಕುಮಾರ್, ನಿಕಟಪೂರ್ವ ಪಾಲಿಕೆ ಸದಸ್ಯ ಶೈಲೇಶ್ ಶೆಟ್ಟಿ, ದಲಿತ ಮುಖಂಡರಾದ ರಘುವೀರ್ ಬಾಬುಗುಡ್ಡೆ, ಶಿವಪ್ಪ ನಂತೂರು, ಹೃದಯನಾಥ್, ಸಂದೀಪ್ ಬೋಳೂರು, ಕಿರಣ್ ಕೊಡಿಯಾಲ್ ಬೈಲ್, ಪ್ರಕಾಶ್ ಕೋಡಿಕಲ್, ಉಮೇಶ್ ಕುಮಾರ್, ದೇವೇಂದ್ರ, ಪ್ರಭಾಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

7 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

7 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

7 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

7 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

7 hours ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

7 hours ago