ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧಿತನಾಗಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರ ಸುಹೇಲ್ ವಿಚಾರಣೆ ವೇಳೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟ ನಡೆಸುವ ಉದ್ದೇಶ ಹೊಂದಿದ್ದಾಗಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಹರಿಹರ ಕೈಗಾರಿಕಾ ಪ್ರದೇಶದ ಖಾಸಗಿ ಕಾರ್ಖಾನೆಯೊಂದರಲ್ಲಿ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ ಸುಹೇಲ್ ತನ್ನ ನೈಜ ಚಟುವಟಿಕೆಗಳನ್ನು ಮರೆಮಾಚಿಕೊಂಡಿದ್ದ ಎನ್ನಲಾಗಿದೆ. ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಈ ಸಂಬಂಧ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ವೇಳೆ ಸುಹೇಲ್ ಬಳಿಯಿದ್ದ ಮೊಬೈಲ್ ಫೋನ್‌ನಲ್ಲಿ ‘ರಾಣಾ ಭಾಯ್’ ಹೆಸರಿನಲ್ಲಿ ಪಾಕಿಸ್ತಾನದ ಕೋಡ್ ಹೊಂದಿರುವ ದೂರವಾಣಿ ಸಂಖ್ಯೆ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಮೊಬೈಲ್ ಗ್ಯಾಲರಿಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡಿರುವ ಫೋಟೋಗಳೂ ಪತ್ತೆಯಾಗಿರುವುದಾಗಿ ಹೇಳಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಶಂಕಿತನ ಸಂಪರ್ಕ ಜಾಲ, ಉದ್ದೇಶ ಹಾಗೂ ಇತರ ಮಾಹಿತಿಗಳ ಬಗ್ಗೆ ಪರಿಶೀಲನೆ ಮುಂದುವರಿದಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…