ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಮಣಿಪಾಲದ ಐನಾಕ್ಸ್ ಮುಂಭಾಗ ಅಪಘಾತಕ್ಕೀಡಾಗಿ ಡಿವೈಡರ್ ಮೇಲೇರಿ ನಿಂತ ಘಟನೆ ನಡೆದಿದೆ.
ಮಣಿಪಾಲ ಟ್ರಾಫಿಕ್ ಸಿಗ್ನಲ್‌ನಿಂದ ಲಕ್ಷ್ಮೀಂದ್ರನಗರ ಕಡೆಗೆ ಸಾಗುವ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿಯ ಡಿವೈಡರ್ ಮೇಲೇರಿ ನಿಂತಿದ್ದು, ಅಪಘಾತದ ರಭಸಕ್ಕೆ ತಡೆಬೇಲಿ ಹಾಗೂ ಬಸ್‌ನ ಮುಂಭಾಗ ಹಾನಿಗೊಳಗಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ. ಇದರಿಂದ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ. ಅಪಘಾತದ ಕಾರಣ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…