ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಫಾರ್ಮ್ ಹೌಸ್ ಗೇಟ್ ತೆರೆಯುತ್ತಿದ್ದಂತೆ ನಾಡಬಾಂಬ್ ಸ್ಫೋಟ…!

ನಾಡಬಾಂಬ್ ಸ್ಪೋ*ಟಗೊಂಡು ವಕೀಲರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಗ್ರಾಮದಲ್ಲಿ ನಡೆದಿದೆ.

ಎನ್.ಸಿ.ಮೋಹನ್ ಗಾಯಗೊಂಡ ವಕೀಲ. ಮೋಹನ್ ಸುಂಡಗಟ್ಟ ಗ್ರಾಮದಲ್ಲಿ ಫಾರ್ಮ್ ಹೌಸ್ ಹೊಂದಿದ್ದಾರೆ. ತಡರಾತ್ರಿ ತಮ್ಮ ಫಾರ್ಮ್ ಹೌಸ್‌ನಲ್ಲಿ ಅವರು ತಂಗಿದ್ದರು. ಈ ವೇಳೆ ಕಿಡಿಗೇಡಿಗಳು ಫಾರ್ಮ್ ಹೌಸ್‌ನ ಗೇಟ್ ಬಳಿ ನಾಡಬಾಂಬ್ ಇರಿಸಿದ್ದಾರೆ. ಮುಂಜಾನೆ ಫಾರ್ಮ್ ಹೌಸ್‌ನಿಂದ ಹೊರಬಂದ ವೇಳೆ ಗೇಟ್ ಬಳಿ ಇರಿಸಿದ್ದ ನಾಡಬಾಂಬ್ ಗಮನಿಸದೇ ಮೋಹನ್ ಅದರ ಮೇಲೆ ಕಾಲಿಟ್ಟಿದ್ದಾರೆ. ಈ ಸಂದರ್ಭ ನಾಡಬಾಂಬ್ ಸ್ಪೋಟಗೊಂಡಿದೆ. ಪರಿಣಾಮ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೋಹನ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡು ಪ್ರಾಣಿಗಳ ಬೇಟೆಗೆ ನಾಡಬಾಂ*ಬ್ ಇಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!