ಮಂಗಳೂರು ನಗರದ ಬೆಂದೂರ್‌ನಲ್ಲಿರುವ ಲಾಡ್ಜ್ ಒಂದರಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಮಾಹಿತಿ ಸಂಗ್ರಹಿಸಿ ದಾಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 35.53 ಗ್ರಾಂ ಎಂಡಿಎಂಎ ಮತ್ತು 7 ಸಾವಿರದ 30 ರೂಪಾಯಿ ನಗದು ಹಣ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ಹಲಸೂರು ನಿವಾಸಿ ಮೊಹಮ್ಮದ್ ನದೀಂ, ಉಳ್ಳಾಲ ತಾಲೂಕು ಸೋಮೇಶ್ವರ ಉಚ್ಚಿಲದ ಪೆರಿಬೈಲ್ ನಿವಾಸಿ ಉಮರುಲ್ ಫಾರೂಕ್ ಮತ್ತು ಉಳ್ಳಾಲ ತಾಲೂಕಿನ ಕೆ.ಸಿ. ರೋಡ್ ಕಿನ್ಯಾ ನಿವಾಸಿ ಇಮ್ಮಿಯಾಜ್ ಇಸ್ಮಾಯಿಲ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಮತ್ತು ಸೊತ್ತುಗಳನ್ನು ಮುಂದಿನ ತನಿಖೆಗಾಗಿ ಕದ್ರಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಕದ್ರಿ ಪೊಲೀಸರು ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…