ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆ ವತಿಯಿಂದ ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿಯಾಗಿ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಮೆಡಿಕಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಪರಿಶೀಲನೆ ವೇಳೆ ಮೆಡಿಕಲ್‌ಗಳಲ್ಲಿ ಮಾರಾಟವಾಗುವ ಔಷಧಿಗಳ ದಾಖಲೆಗಳನ್ನು ಪರಿಶೀಲಿಸಲಾಯಿತು. ವೈದ್ಯರ ಪ್ರಿಸ್ಕ್ರಿಪ್ಷನ್ ಆಧಾರಿತ ಔಷಧಗಳ ವಿತರಣೆ, ನಿಷೇಧಿತ ಹಾಗೂ ದುರುಪಯೋಗಕ್ಕೆ ಒಳಪಡುವ ಔಷಧಿಗಳ ಸಂಗ್ರಹ ಮತ್ತು ಮಾರಾಟದ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮಾದಕ ವಸ್ತುಗಳ ದುರುಪಯೋಗಕ್ಕೆ ಕಾರಣವಾಗಬಹುದಾದ ಔಷಧಿಗಳನ್ನು ವೈದ್ಯರ ಪ್ರಿಸ್ಕ್ರಿಪ್ಷನ್ ಹಾಗೂ ಅಗತ್ಯ ದಾಖಲೆಗಳಿಲ್ಲದೆ ಮಾರಾಟ ಮಾಡಬಾರದು ಎಂದು ಮೆಡಿಕಲ್ ಮಾಲೀಕರು ಮತ್ತು ಸಿಬ್ಬಂದಿಗೆ ಸೂಚನೆ ನೀಡಲಾಯಿತು. ಅಲ್ಲದೆ, ಸಂಬಂಧಿತ ಕಾನೂನು ಹಾಗೂ ಔಷಧ ಮಾರಾಟಕ್ಕೆ ಸಂಬಂಧಿಸಿದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…