ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮುಳುಗುತ್ತಿದ್ದ ಮಂಜು ಮಾತಾ ಬೋಟ್‌ನಿಂದ ಮೀನುಗಾರರ ರಕ್ಷಣೆ…..!

ಭಾರತೀಯ ತಟ ರಕ್ಷಣಾ ಪಡೆ ಆಳ ಸಮುದ್ರದಲ್ಲಿ ಅತ್ಯಂತ ಸವಾಲಿನ ಕಾರ್ಯಾಚರಣೆ ನಡೆಸಿ ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದೆ.

ಅತ್ಯಂತ ಸವಾಲಿನ ಕಡಲ ಶೋಧದಲ್ಲಿ ನಿನ್ನೆ ರಾತ್ರಿ ಇಂಡಿಯನ್ ಕೋಸ್ಟ್ ಗಾರ್ಡ್ ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಿಸಿದೆ. ಆಳ ಸಮುದ್ರದಲ್ಲಿ 33 ನಾಟಿಕಲ್ ಮೈಲ್ ದೂರದಲ್ಲಿ ಉಡುಪಿಯ ಮಂಜು ಮಾತಾ ಹೆಸರಿನ ಮೀನುಗಾರಿಕಾ ಬೋಟ್‌ನಲ್ಲಿದ್ದ 6 ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದಾರೆ.

ಬೋಟ್‌ನ ತಳಭಾಗಕ್ಕೆ ಹಾನಿಯಾಗಿ ಬೋಟ್‌ನೊಳಗೆ ಸಮುದ್ರದ ನೀರು ನುಗ್ಗ ತೊಡಗಿತ್ತು. ಮುಳುಗುತ್ತಿದ್ದ ಮೀನುಗಾರಿಕಾ ಬೋಟ್‌ನಿಂದ ತುರ್ತು ಸಂದೇಶ ರವಾನೆಯಾಗಿತ್ತು. ತುರ್ತು ಸಂದೇಶ ಸ್ವೀಕರಿಸಿದ ಕೋಸ್ಟ್ ಗಾರ್ಡ್ ಬೋಟ್ ಐ.ಸಿ.ಜಿ ಸಚೇತ್ ತಕ್ಷಣ ಕಾರ್ಯಾಚರಣೆಗೆ ಇಳಿದಿತ್ತು. ಮುಳುಗುತಿದ್ದ ಮೀನುಗಾರಿಕಾ ಬೋಟ್ ಮಂಜು ಮಾತಾವನ್ನು ಪತ್ತೆ ಹಚ್ಚಿ 90 ನಿಮಿಷಗಳ ಸವಾಲಿನ ರಕ್ಷಣಾ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಯೋಧರು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆಯೂ ಮೀನುಗಾರರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ರಿಮೋಟ್-ಆಪರೇಟೆಡ್ ಲೈಫ್‌ಬಾಯ್‌ಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!