ಭಾರತೀಯ ತಟ ರಕ್ಷಣಾ ಪಡೆ ಆಳ ಸಮುದ್ರದಲ್ಲಿ ಅತ್ಯಂತ ಸವಾಲಿನ ಕಾರ್ಯಾಚರಣೆ ನಡೆಸಿ ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದೆ.
ಅತ್ಯಂತ ಸವಾಲಿನ ಕಡಲ ಶೋಧದಲ್ಲಿ ನಿನ್ನೆ ರಾತ್ರಿ ಇಂಡಿಯನ್ ಕೋಸ್ಟ್ ಗಾರ್ಡ್ ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಿಸಿದೆ. ಆಳ ಸಮುದ್ರದಲ್ಲಿ 33 ನಾಟಿಕಲ್ ಮೈಲ್ ದೂರದಲ್ಲಿ ಉಡುಪಿಯ ಮಂಜು ಮಾತಾ ಹೆಸರಿನ ಮೀನುಗಾರಿಕಾ ಬೋಟ್‌ನಲ್ಲಿದ್ದ 6 ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದಾರೆ.
ಬೋಟ್‌ನ ತಳಭಾಗಕ್ಕೆ ಹಾನಿಯಾಗಿ ಬೋಟ್‌ನೊಳಗೆ ಸಮುದ್ರದ ನೀರು ನುಗ್ಗ ತೊಡಗಿತ್ತು. ಮುಳುಗುತ್ತಿದ್ದ ಮೀನುಗಾರಿಕಾ ಬೋಟ್‌ನಿಂದ ತುರ್ತು ಸಂದೇಶ ರವಾನೆಯಾಗಿತ್ತು. ತುರ್ತು ಸಂದೇಶ ಸ್ವೀಕರಿಸಿದ ಕೋಸ್ಟ್ ಗಾರ್ಡ್ ಬೋಟ್ ಐ.ಸಿ.ಜಿ ಸಚೇತ್ ತಕ್ಷಣ ಕಾರ್ಯಾಚರಣೆಗೆ ಇಳಿದಿತ್ತು. ಮುಳುಗುತಿದ್ದ ಮೀನುಗಾರಿಕಾ ಬೋಟ್ ಮಂಜು ಮಾತಾವನ್ನು ಪತ್ತೆ ಹಚ್ಚಿ 90 ನಿಮಿಷಗಳ ಸವಾಲಿನ ರಕ್ಷಣಾ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಯೋಧರು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆಯೂ ಮೀನುಗಾರರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ರಿಮೋಟ್-ಆಪರೇಟೆಡ್ ಲೈಫ್‌ಬಾಯ್‌ಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…