ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ನೈಜ ಸುದ್ದಿಗಳೇ ಆರೋಗ್ಯಕರ ಸಮಾಜದ ಅಡಿಪಾಯ”: ಸುಧೀರ್ ಕುಮಾರ್ ರೆಡ್ಡಿ

ವೈಭವೀಕರಣವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.

ಪತ್ರಿಕಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾಭವನ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಳಿತ ವ್ಯವಸ್ಥೆ ಹಾಗೂ ಮಾಧ್ಯಮ ಒಂದೇ ಹಾದಿಯಲ್ಲಿ ಸಾಗುತ್ತಿದ್ದು, ಇದು ಅರೋಗ್ಯಕರ ಬೆಳವಣಿಗೆ. ಒಂದೇ ಘಟನೆಯನ್ನು ಹಲವು ರೀತಿಯಲ್ಲಿ ವೈಭವೀಕರಣ ಮಾಡಲಾಗಿರುವ ಸುದ್ದಿಗಳನ್ನು ನಾನು ಹಿಂದೆ ಗಮನಿಸಿದ್ದೆ. ಆದರೆ ಇಂದು ಫ್ಯಾಕ್ಟ್ ಚೆಕ್ ಮಾದರಿಯಲ್ಲಿ ಸುದ್ದಿಗಳನ್ನು ಪ್ರಕಟಿಸಲಾಗುತ್ತಿದೆ. ಇದು ಸಂತಸದ ವಿಚಾರ. ಪತ್ರಕರ್ತರು ನೈಜ ಸುದ್ದಿಗಳನ್ನು ನೈಜವಾಗಿ ನೀಡಬೇಕು. ಸಮಾಜದಲ್ಲಿ ವಸ್ತು ನಿಷ್ಠರಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಸಮಾರಂಭದ ವೇದಿಕೆಯಲ್ಲಿ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!