ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫರೂಖಾಬಾದ್‌ನಲ್ಲಿ 125 ವರ್ಷಗಳಷ್ಟು ಹಳೆಯದಾದ ಗುರುದ್ವಾರ ಶ್ರೀ ಗುರು ಸಿಂಗ್ ಸಭಾ ಸಾಹಿಬ್ ಅನ್ನು ಧ್ವಂಸಗೊಳಿಸಿರುವ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಈ ಕೃತ್ಯವನ್ನು ಭಾರತ ತೀವ್ರವಾಗಿ ಖಂಡಿಸಿದ್ದು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಸರ್ಕಾರವನ್ನು ಒತ್ತಾಯಿಸಿದೆ. ಪಾಕಿಸ್ತಾನದ ಅಧಿಕಾರಿಗಳ ಪ್ರಕಾರ, ಜೂನ್ 24ರ ರಾತ್ರಿ ಸ್ಥಳೀಯ ಉದ್ಯಮಿಯೊಬ್ಬರು ಸಂಬಂಧಿತ ಇಲಾಖೆಯಿಂದ ಅಗತ್ಯ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆಯದೆ ಗುರುದ್ವಾರವನ್ನು ನೆಲಸಮಗೊಳಿಸಿದ್ದಾರೆ. ಈ ಘಟನೆಗೆ ಅಲ್ಪಸಂಖ್ಯಾತ ಸಿಖ್ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದೆ. ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಘಟನೆಯನ್ನು “ಅತ್ಯಂತ ಖಂಡನೀಯ ಹಾಗೂ ಉದ್ದೇಶಪೂರ್ವಕ ವಿಧ್ವಂಸಕ ಕೃತ್ಯ” ಎಂದು ಬಣ್ಣಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…