ಕರಾವಳಿ

ತೊಕ್ಕೊಟ್ಟು: ಕೆರೆಬೈಲ್‌ನಲ್ಲಿ ಖಾಸಗಿ ಎಸ್ಟೇಟ್‌ನ ಬೃಹತ್ ಆವರಣ ಗೋಡೆ ಕುಸಿತ…!

ಕರಾವಳಿಯಲ್ಲಿ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ತೊಕ್ಕೊಟ್ಟು ಸಮೀಪದ ಕೆರೆಬೈಲ್‌ನಲ್ಲಿ ಖಾಸಗಿ ಎಸ್ಟೇಟ್‌ನ ಬೃಹತ್ ಆವರಣ ಗೋಡೆ ಕುಸಿದು ಪಕ್ಕದಲ್ಲಿದ್ದ ಮನೆ ಸಂಪೂರ್ಣ ನೆಲಸಮಗೊಂಡ ಘಟನೆ ನಡೆದಿದೆ.

ಅಪಾಯದ ಮುನ್ಸೂಚನೆ ಅರಿತು ಎರಡು ವಾರಗಳ ಹಿಂದೆಯೇ ಕುಟುಂಬ ಸ್ಥಳಾಂತರಗೊಂಡಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ದುರಂತ ತಪ್ಪಿದೆ. ಕೆರೆಬೈಲ್ ಗುಡ್ಡೆಯ ನಿವಾಸಿ ಕಿಶೋರ್ ಅವರ ಮನೆ ಗೋಡೆ ಕುಸಿತದ ಹೊಡೆತಕ್ಕೆ ಸಂಪೂರ್ಣ ಧ್ವಂಸಗೊಂಡಿದೆ. ಕೆರೆಬೈಲ್ ಗುಡ್ಡ ಪ್ರದೇಶದಲ್ಲಿ ಡೆಲ್ಟಾ ಇನ್ಸಾಲೋಜಿಸ್ಟಿಕ್ಸ್ ವರ್ಲ್ಡ್ ವೈಡ್ ಲಿ. ಸಂಸ್ಥೆಯ ಮಾಲಕರಾದ ಅಹಮ್ಮದ್ ಮೊಯ್ದಿನ್ ಅವರು ನಿರ್ಮಿಸಿದ್ದ ಖಾಸಗಿ ಎಸ್ಟೇಟ್‌ನ ಎತ್ತರದ ಆವರಣ ಗೋಡೆ ಕಳೆದ ವರ್ಷದ ಭಾರೀ ಮಳೆಗೆ ಬಿರುಕು ಬಿಟ್ಟು ಕಿಶೋರ್ ಅವರ ಮನೆಯತ್ತ ವಾಲಿ ನಿಂತಿತ್ತು.

ಈ ಕುರಿತು ಕಿಶೋರ್ ಅವರು ಉಳ್ಳಾಲ ನಗರಸಭೆಗೆ ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಕಿಶೋರ್ ಅವರ ಕುಟುಂಬ ಸೇರಿದಂತೆ ಅಪಾಯದ ವಲಯದಲ್ಲಿದ್ದ ಸುಮಾರು ಹತ್ತು ಮನೆಗಳ ನಿವಾಸಿಗಳನ್ನು ಬಾಡಿಗೆ ಮನೆಗಳಿಗೆ ಸ್ಥಳಾಂತರಿಸಿದ್ದರು. ಆದರೆ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಗೋಡೆ ಸಂಪೂರ್ಣ ಕುಸಿದು ಕಿಶೋರ್ ಅವರ ಮನೆ ನೆಲಸಮಗೊಂಡಿದೆ. ಆವರಣ ಗೋಡೆ ಯಾವಾಗ ಬೇಕಾದರೂ ಕುಸಿಯಬಹುದು ಎಂಬ ಆತಂಕದಿಂದ ಕಿಶೋರ್ ಅವರು ತಾಯಿ ಶಕುಂತಳಾ, ಪತ್ನಿ ಭಾರತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಎರಡು ವಾರಗಳ ಹಿಂದೆಯೇ ಮಂಗಳೂರಿನ ಕಾವೂರಿನಲ್ಲಿರುವ ಪತ್ನಿಯ ಮನೆಗೆ ಸ್ಥಳಾಂತರಗೊಂಡಿದ್ದರು.

ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗೋಡೆ ಕಳೆದ ವರ್ಷವೇ ಅಪಾಯಕಾರಿಯಾಗಿ ವಾಲಿದ್ದರೂ ಅದನ್ನು ತೆರವುಗೊಳಿಸಲು ಅಥವಾ ಶಾಶ್ವತ ಪರಿಹಾರ ಕೈಗೊಳ್ಳಲು ಉಳ್ಳಾಲ ನಗರಸಭೆ ವಿಫಲವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳೀಯ ಮುಖಂಡ ಪ್ರಕಾಶ್ ಪಿಂಟೊ ಮಾತನಾಡಿ, “ಅಪಾಯದಲ್ಲಿದ್ದ ಕುಟುಂಬಗಳನ್ನು ಸ್ಥಳಾಂತರಿಸಿದ ಅಧಿಕಾರಿಗಳು ಮನೆ ಬಾಡಿಗೆ ನೀಡುವುದಾಗಿ ಭರವಸೆ ನೀಡಿದ್ದರು.

ಆದರೆ ಕೇವಲ ಎರಡು ಕುಟುಂಬಗಳಿಗೆ ಮಾತ್ರ ಒಂದು ತಿಂಗಳ ಬಾಡಿಗೆ ನೀಡಿ ಉಳಿದವರನ್ನು ನಿರ್ಲಕ್ಷಿಸಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿಯಿಂದಲೇ ಕಿಶೋರ್ ಅವರ ಮನೆ ನಾಶವಾಗಿದೆ,” ಎಂದು ಆರೋಪಿಸಿದರು. ಇನ್ನೂ ಎಸ್ಟೇಟ್‌ನ ಉಳಿದ ಆವರಣ ಗೋಡೆಯೂ ಕುಸಿಯುವ ಅಪಾಯದಲ್ಲಿದ್ದು, ಕಾಶಿನಾಥ್, ಮಣಿ, ರಝಾಕ್, ನಝೀರ್, ಅನ್ನು ರಾಜ ಕೊಟ್ಟಾರಿ ಹಾಗೂ ಸತ್ಯ ಅವರ ಮನೆಗಳಿಗೂ ಅಪಾಯ ಎದುರಾಗಿದೆ. ಹೀಗಾಗಿ ನಗರಸಭೆ ಕೂಡಲೇ ಅಪಾಯದ ವಲಯದಲ್ಲಿರುವ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…

19 hours ago

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…

2 days ago

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…

2 days ago

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…

4 days ago

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…

4 days ago

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…

4 days ago